ಜಿಲ್ಲಾ ಉಸ್ತುವಾರಿ ಬದಲಾವಣೆ ಕುರಿತು ಯಾವುದೇ ಅಸಮಾಧಾನವಿಲ್ಲ, ಎಲ್ಲ ಸಚಿವರ ಜತೆ ಮಾತನಾಡಿರುವೆ: ಸಿಎಂ

Bommai
Published on

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆಗೆ ಯಾರೂ ಅಸಮಾಧಾನ ವ್ಯಕ್ತಪಡಿಸಿಲ್ಲ. ಎಲ್ಲರ ಬಳಿ ಮಾತನಾಡಿದ್ದೇನೆ. ಜಿಲ್ಲಾ ಉಸ್ತುವಾರಿ ಸ್ಥಾನ ಬದಲಾವಣೆ ಮಾಡುವ ಮುನ್ನವೂ ಅವರ ಬಳಿ ಮಾತನಾಡಿರುವೆ. ನಂತರವೂ ಮಾತನಾಡಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ‌ ಸ್ಪಷ್ಟಪಡಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಸಿಎಂ, ಇದು ನಮ್ಮ ಪಕ್ಷದ ರಾಜಕೀಯ ನೀತಿ. ಯಾವುದೇ ಅಸಮಾಧಾನ ಇಲ್ಲ. ಎಲ್ಲ ಸಚಿವರ ಬಳಿಯೂ ಮಾತನಾಡಿದ್ದೇನೆ. ಅಸಮಾಧಾನದ ಪ್ರಶ್ನೆಯೇ ಇಲ್ಲ. ಸರ್ಕಾರವನ್ನು ಅತ್ಯಂತ ಸೂಕ್ತವಾಗಿ ನಿರ್ವಹಿಸಿ, ಜನಪರ ಕೆಲಸ ಮಾಡಲು ಬದ್ಧವಾಗಿದ್ದೇವೆ. ಇದು ವಸ್ತು ಸ್ಥಿತಿ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net