

ಬೆಂಗಳೂರು: ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಹತ್ಯೆಗೆ ಸಂಚು ರೂಪಿಸಿದ್ದರು ಎನ್ನಲಾದ ಪ್ರಕರಣವನ್ನು ಉನ್ನತ ಮಟ್ಟದ ತನಿಖೆಗೆ ವಹಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನವದೆಹಲಿಗೆ ತೆರಳುವ ಮುನ್ನ ಮಾಧ್ಯಮಗಳ ಜತೆ ಮಾತನಾಡಿದ ಸಿಎಂ, ಈಗಾಗಲೇ ಪೊಲೀಸರು ತನಿಖೆ ಈ ಪ್ರಕರಣ ಕುರಿತು ನಡೆಸುತ್ತಿದ್ದು, ಪ್ರಾಥಮಿಕ ತನಿಖೆ ನಂತರ ಉನ್ನತ ಮಟ್ಟದ ತನಿಖೆ ನಡೆಸುವ ಬಗ್ಗೆ ನಿರ್ಧರಿಸಲಾಗುವುದು ಎಂದರು.
ಸಿಎಂ ದೆಹಲಿಗೆ ತೆರಳುವ ಮುನ್ನ ಆರ್.ಟಿ. ನಗರ ನಿವಾಸಕ್ಕೆ ಶಾಸಕ ಎಸ್.ಆರ್.ವಿಶ್ವನಾಥ್ ಭೇಟಿ ನೀಡಿ ಕೆಲಕಾಲ ಮಾತುಕತೆ ನಡೆಸಿದರು. ಪ್ರಕರಣವನ್ನು ಉನ್ನತಮಟ್ಟದ ತನಿಖೆಗೆ ವಹಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದರು.