ದೇವೇಗೌಡರ ಮನೆಗೆ ಸಿಎಂ ಬೊಮ್ಮಾಯಿ ಭೇಟಿ

devegowda bommai
Published on

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ನಿವಾಸಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಭೇಟಿ ನೀಡಿ ಕೆಲಕಾಲ ಜೆಡಿಎಸ್​ ವರಿಷ್ಠರ ಜತೆ ಮಾತುಕತೆ ನಡೆಸಿದರು.

ಪದ್ಮನಾಭನಗರದಲ್ಲಿರುವ ನಿವಾಸಕ್ಕೆ ಭಾನುವಾರ ಭೇಟಿ ನೀಡಿದ ಸಿಎಂ, ದೇವೇಗೌಡರ ಜತೆ ಅನೌಪಚಾರಿಕವಾಗಿ ಮಾತುಕತೆ ನಡೆಸಿದರು.

ಈ ಸಂದರ್ಭದಲ್ಲಿ ಮುಖ್ಯಮಂತ್ರಿಗೆ ಮಾಜಿ ಪ್ರಧಾನಿ ಶುಭ ಕೋರಿದರು. ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಚರ್ಚಿಸಿದರು. ಜನತಾ ಪರಿವಾರದ ಹಳೆಯ ನೆನಪುಗಳನ್ನೂ ಮೆಲುಕು ಹಾಕ್ತಿದರು. ಮಾಜಿ ಸಚಿವರಾದ ವಿ.ಸೋಮಣ್ಣ, ಎಚ್.ಡಿ. ರೇವಣ್ಣ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net