ಭುಗಿಲೆದ್ದ ಹಿಜಾಬ್​ ವಿವಾದ: ರಾಜ್ಯಾದ್ಯಂತ ನಾಳೆಯಿಂದ 3 ದಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದ ಸಿಎಂ

Bommai
Published on

ಬೆಂಗಳೂರು: ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಹಲವೆಡೆ ಸಂಘರ್ಷ ವಿಕೋಪಕ್ಕೆ ತಿರುಗಿದೆ. ಪರಿಸ್ಥಿತಿ ನಿಯಂತ್ರಿಸಲು ನಾಳೆಯಿಂದ ರಾಜ್ಯಾದ್ಯಂತ ಮೂರು ದಿನ ಎಲ್ಲ ಶಾಲಾ-ಕಾಲೇಜುಗಳಿಗೆ ಸರ್ಕಾರ ರಜೆ ಘೋಷಿಸಿದೆ.

ಈ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್​ ಮಾಡಿದ್ದು, ನಾಳೆಯಿಂದ(ಫೆ.9) ಮೂರು ದಿನ ರಾಜ್ಯಾದ್ಯಂತ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳು, ಶಿಕ್ಷಕರು, ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಹಾಗೂ ರಾಜ್ಯದ ಸಮಸ್ತ ಜನತೆ ರಾಜ್ಯದಲ್ಲಿ ಶಾಂತಿ ಕಾಪಾಡಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ.

ಹಲವು ಜಿಲ್ಲೆಗಳಲ್ಲಿ ಹಿಜಾಬ್​ ವಿವಾದ ಭುಗಿಲೆದ್ದಿದ್ದು, ಪರಿಸ್ಥಿತಿ ನಿಯಂತ್ರಿಸಲು ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಶಾಲೆಗಳು, ಪಿಯು ಕಾಲೇಜುಗಳು, ಪದವಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥನಾರಾಯಣ್​ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net