

ಬೆಂಗಳೂರು: ಕರೊನಾ ಸಂಕಷ್ಟಕಾಲದಲ್ಲಿ ರಾಜ್ಯ ಸರ್ಕಾರ ಕೈಗೊಳ್ಳಲಿರುವ ಮಹತ್ವದ ನಿರ್ಧಾರ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದು ಮಾಧ್ಯಮಗೋಷ್ಠಿ ನಡೆಸಲಿದ್ದಾರೆ. ಇದಕ್ಕೂ ಮುನ್ನ ಸಚಿವರು ಮತ್ತು ಅಧಿಕಾರಿಗಳ ಸಭೆಯನ್ನ ಸಿಎಂ ನಡೆಸಿದರು.
ಕರೊನಾ ಸಂಕಷ್ಟಕ್ಕೆ ಸಿಲುಕಿ ಜೀವನ ನಡೆಸಲು ಪರದಾಡುತ್ತಿರುವ ಜನರ ಅನುಕೂಲಕ್ಕಾಗಿ ಕರೊನಾ ವಿಶೇಷ ಪ್ಯಾಕೇಜ್ ಘೋಷಣೆ ಮಾಡುವ ಸಾಧ್ಯತೆ ಇದೆ. ಜತೆಗೆ ಸೋಂಕನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಮತ್ತಷ್ಟು ದಿನ ಲಾಕ್ಡೌನ್ ವಿಸ್ತರಣೆ ಮಾಡಬಹುದು. ಈ ಬಗ್ಗೆ ಸಿಎಂ ನಡೆಸುವ ಸುದ್ದಿಗೋಷ್ಠಿಯಲ್ಲಿ ಸ್ಪಷ್ಟತೆ ಸಿಗಲಿದೆ.
ಸಭೆಯಲ್ಲಿ ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಲಕ್ಷ್ಮಣ ಸವದಿ, ಸಚಿವರಾದ ಜಗದೀಶ್ ಶೆಟ್ಟರ್, ಕೆ.ಎಸ್.ಈಶ್ವರಪ್ಪ, ಜೆ.ಸಿ.ಮಾಧುಸ್ವಾಮಿ, ಎಸ್.ಸುರೇಶ್ ಕುಮಾರ್, ಎಸ್.ಟಿ.ಸೋಮಶೇಖರ್, ಬಿ.ಎ. ಬಸವರಾಜ ಉಪಸ್ಥಿತರಿದ್ದರು.