ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ನೂತನ ಕಟ್ಟಡ ಉದ್ಘಾಟಿಸಿದ ಸಿಎಂ

new building of Kalaburagi Nagar Police Commissionerate
Published on

ಕಲಬುರಗಿ: ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದ ರಸ್ತೆಯಲ್ಲಿ 18.50 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಲಬುರಗಿ ನಗರ ಪೊಲೀಸ್ ಆಯುಕ್ತಾಲಯದ ಕಟ್ಟಡವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಉದ್ಘಾಟಿಸಿದರು.

ಕಲಬುರಗಿ ಜಿಲ್ಲಾಡಳಿತ ಹಾಗೂ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ದಿನಾಚರಣೆ ಸಮಿತಿ ಕಲಬುರಗಿ ವತಿಯಿಂದ ಪೊಲೀಸ್ ಮೈದಾನದಲ್ಲಿ ಕಲ್ಯಾಣ ಕರ್ನಾಟಕದ ಅಮೃತ ಮಹೋತ್ಸವದ ನಿಮಿತ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಸಿಎಂ ಧ್ವಜಾರೋಹಣ ನೆರವೇರಿಸಿದರು. ಬಳಿಕ ಪೊಲೀಸ್​ ಆಯುಕ್ತಾಲಯ ಕಟ್ಟಡ ಉದ್ಘಾಟಿಸಿದರು.

ನೂತನ ಕಟ್ಟಡವನ್ನು ಸಚಿವ-ಶಾಸಕರೊಂದಿಗೆ ವೀಕ್ಷಿಸಿದರು. ಮುಖ್ಯಮಂತ್ರಿಗಳು ವಿಸಿಟರ್ ವಹಿಯಲ್ಲಿ ಹಸ್ತಾಕ್ಷರ ಮಾಡಿ, ನೂತನ ಕಚೇರಿಗೆ ಕೂಡಲೇ ಕಚೇರಿ ವರ್ಗಾಯಿಸಿ ಕೆಲಸ ಅರಂಭಿಸುವಂತೆ ನಗರ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ ಅವರಿಗೆ ಸೂಚಿಸಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹ ಸಚಿವ ಆರಗ ಜ್ಞಾನೇಂದ್ರ ಅವರಿಗೆ ಪೊಲೀಸ್ ಆಯುಕ್ತ ಡಾ.ವೈ.ಎಸ್.ರವಿಕುಮಾರ್​ ಅವರು ನೆನಪಿನ ಕಾಣಿಕೆ ನೀಡಿ ಸತ್ಕರಿಸಿದರು. ಇದಕ್ಕೂ ಮೊದಲು ಪೊಲೀಸ್ ತುಕಡಿಯಿಂದ ಮುಖ್ಯಮಂತ್ರಿಗಳಿಗೆ ಗೌರವ ವಂದನೆ ಸಲ್ಲಿಸಲಾಯಿತು. ಸಚಿವರಾದ ಭಗವಂತ ಖೂಬಾ, ಡಾ.ಮುರುಗೇಶ್​ ನಿರಾಣಿ, ಮುನಿರತ್ನ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net