

ಬೆಂಗಳೂರು: 'ಆ ದಿನಗಳು' ನಟ ಚೇತನ್ ವಿರುದ್ಧ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಸಚ್ಚಿದಾನಂದ ಮೂರ್ತಿ ನೇತೃತ್ವದ ತಂಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.
ಬ್ರಾಹ್ಮಣರ ಬಗ್ಗೆ ನಟ ಚೇತನ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಬ್ರಾಹ್ಮಣಿಕೆ ಹಾಗೂ ಬ್ರಾಹ್ಮಣತ್ವ ಕುರಿತು ಭಯೋತ್ಪಾದಕರ ರೀತಿಯಲ್ಲಿ ಮಾತನಾಡಿದ್ದಾರೆ. ಇವರ ಹೇಳಿಕೆಯಿಂದ ಬ್ರಾಹ್ಮಣ ಸಮುದಾಯಕ್ಕೆ ತುಂಬಾ ನೋವಾಗಿದೆ. ಹಾಗಾಗಿ ಈ ಕೂಡಲೇ ಚೇತನ್ ಅವರು ಬ್ರಾಹ್ಮಣ ಸಮುದಾಯದ ಬಳಿ ಬೇಷರತ್ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದ್ದಾರೆ. ಮತ್ತೊಮ್ಮೆ ಸಮುದಾಯದ ವಿರುದ್ಧ ಮಾತನಾಡಬಾರದು ಎಂದು ತಾಕೀತು ಮಾಡಿದ್ದಾರೆ.