ಹಿಜಾಬ್​ ಹೆಸರಲ್ಲಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಅಡ್ಡಿ: ರಾಹುಲ್ ಗಾಂಧಿ

rahulgandhi-karma
rahulgandhi
Published on

ನವದೆಹಲಿ: ''ಹಿಜಾಬ್​ ಹೆಸರಲ್ಲಿ ಶಿಕ್ಷಣಕ್ಕೆ ಅಡ್ಡಿ ಪಡಿಸುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನ ಕಸಿಯಲಾಗುತ್ತಿದೆ'' ಎಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಕರ್ನಾಟಕ ಬಿಜೆಪಿ, ''ಭಾರತದ ಭವಿಷ್ಯಕ್ಕೆ ರಾಹುಲ್ ಗಾಂಧಿ'' ಅಪಾಯಕಾರಿ ಎಂದು ಟೀಕಿಸಿದೆ.

ಕರ್ನಾಟಕದಲ್ಲಿ ಹಿಜಾಬ್​ ವಿವಾದ ತೀವ್ರ ಸ್ವರೂಪ ಪಡೆಯುತ್ತಿರುವ ಬೆನ್ನಲ್ಲೇ ರಾಹುಲ್​ ಗಾಂಧಿ ಹಿಜಾಬ್​ ಕುರಿತು ಶನಿವಾರ ಟ್ವೀಟ್​ ಮಾಡಿದ ರಾಹುಲ್​ ಗಾಂಧಿ, ''ಹಿಜಾಬ್​ ಹೆಸರಲ್ಲಿ ಶಿಕ್ಷಣಕ್ಕೆ ಅಡ್ಡಿ ಮಾಡುವ ಮೂಲಕ ದೇಶದ ಹೆಣ್ಣುಮಕ್ಕಳ ಭವಿಷ್ಯವನ್ನ ಕಸಿಯಲಾಗುತ್ತಿದೆ. ತಾಯಿ ಸರಸ್ವತಿಯು ಎಲ್ಲರಿಗೂ ಜ್ಞಾನ ನೀಡುತ್ತಾಳೆ. ಅವಳು ಭೇದಭಾವ ಮಾಡುವುದಿಲ್ಲ'' ಎಂದಿದ್ದಾರೆ.

ರಾಹುಲ್​ ಗಾಂಧಿ ಟ್ವೀಟ್​ಗೆ ಪ್ರತಿಕ್ರಿಯಿಸಿದ ಕರ್ನಾಟಕ ಬಿಜೆಪಿ, "ಶಿಕ್ಷಣವನ್ನು ಕೋಮುವಾದ ಮಾಡುವ ಮೂಲಕ, ಕಾಂಗ್ರೆಸ್ ಸಹ-ಮಾಲೀಕ ರಾಹುಲ್ ಗಾಂಧಿ ಅವರು ಭಾರತದ ಭವಿಷ್ಯಕ್ಕೆ ಅಪಾಯಕಾರಿ ಎಂದು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ'' ಎಂದು ಟೀಕಿಸಿದೆ.

ಅತ್ತ ವಿಪಕ್ಷ ನಾಯಕ ಸಿದ್ದರಾಮಯ್ಯ, ''ಶಾಲಾ- ಕಾಲೇಜುಗಳಲ್ಲಿ ಹಿಜಾಬ್​ ನಿಷೇಧ ಮೂಲಭೂತ ಹಕ್ಕಿನ ಉಲ್ಲಂಘನೆ'' ಎಂದು ನಿನ್ನೆ(ಶುಕ್ರವಾರ) ಆಕ್ರೋಶ ಹೊರಹಾಕಿದ್ದರು. ಸದ್ಯ ಈ ವಿವಾದ ಕಾಂಗ್ರೆಸ್​ ಮತ್ತು ಬಿಜೆಪಿ ನಡುವಿನ ವಾಕ್ಸಮರಕ್ಕೆ ಕಾರಣವಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net