

ಬೆಂಗಳೂರು: ವಿಧಾನಸೌಧ ಬಳಿಯಿರುವ ಗಾಂಧೀಜಿ ಪುತ್ಥಳಿ ಮುಂದೆ ಕಾಂಗ್ರೆಸ್ ನಾಯಕರು ಧರಣಿ ನಡೆಸುತ್ತಿದ್ದಾರೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಹಿರಿಯ ನಾಯಕರಾದ ರಮೇಶ್ ಕುಮಾರ್, ಎಚ್.ಕೆ.ಪಾಟೀಲ್, ಜಾರ್ಜ್, ಎಸ್.ಆರ್.ಪಾಟೀಲ್, ಕೃಷ್ಣ ಬೈರೇಗೌಡ, ಪ್ರಿಯಾಂಕ್ ಖರ್ಗೆ ಮತ್ತಿತರ ಮುಖಂಡರು ಭಾಗಿಯಾಗಿದ್ದಾರೆ.
ಫೋನ್ ಕದ್ದಾಲಿಕೆ ಪ್ರಕರಣವನ್ನು ಕೇಂದ್ರ ಸರ್ಕಾರ ಗಂಭೀರವಾಗಿ ಪರಿಗಣಿಸಿ, ತನಿಖೆಗೆ ಆಗ್ರಹಿಸಿ ಗುರುವಾರ ಬೆಳಗ್ಗೆ ಕಾಂಗ್ರೆಸ್ ರಾಜಭವನ ಮುತ್ತಿಗೆ ಹಾಕಲು ಯೋಜನೆ ಹಾಕಿಕೊಂಡಿತ್ತು. ಆದರೆ, ಪೊಲೀಸರಿಂದ ಅನುಮತಿ ಸಿಗದ ಕಾರಣಕ್ಕೆ ವಿಧಾನಸೌಧದ ಗಾಂಧೀಜಿ ಪುತ್ಥಳಿ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಕೇಂದ್ರ ಸರ್ಕಾರದ ವಿರುದ್ಧ ಹೋರಾಟಗಳನ್ನು ಕೈಗೊಳ್ಳಬೇಕೆಂದು ಪಕ್ಷದ ರಾಷ್ಟ್ರೀಯ ನಾಯಕರು ನೀಡಿದ ಸೂಚನೆಯಂತೆ ಎಂದಿದ್ದಾರೆ ಇಂದು ಬೃಹತ್ ಹೋರಾಟ ನಡೆಯುತ್ತಿದೆ.