ಮೈಸೂರಿಗೆ ನಾಳೆ ಸೋನಿಯಾ ಗಾಂಧಿ ಭೇಟಿ

soniya gandhi
Published on

ಮೈಸೂರು: ಕಾಂಗ್ರೆಸ್​ನ ಅಧಿನಾಯಕಿ ಸೋನಿಯಾ ಗಾಂಧಿ ನಾಳೆ(ಸೋಮವಾರ) ಮೈಸೂರಿಗೆ ಆಗಮಿಸಲಿದ್ದಾರೆ.

ಬೆಳಗ್ಗೆ 8 ಗಂಟೆಗೆ ವಿಶೇಷ ವಿಮಾನದ ಮೂಲಕ ಮೈಸೂರು ವಿಮಾನ‌ ನಿಲ್ದಾಣಕ್ಕೆ ಆಗಮಿಸುವ ಸೋನಿಯಾ ಗಾಂಧಿ, ಸುಮಾರು 2 ಗಂಟೆ ಕಾಲ ಭಾರತ್​ ಜೋಡೋ ಯಾತ್ರೆಯಲ್ಲಿ ರಾಹುಲ್​ ಗಾಂಧಿ ಜತೆ ಹೆಜ್ಜೆ ಹಾಕಲಿದ್ದಾರೆ. ನಂತರ ಎರಡು ದಿನಗಳ ಕಾಲ ಕೊಡಗಿನ ಖಾಸಗಿ ರೆಸಾರ್ಟ್​ನಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಹಳೇ ಮೈಸೂರು ಭಾಗಕ್ಕೆ ಕಾಂಗ್ರೆಸ್​ ಹೆಚ್ಚು ಒತ್ತು ಕೊಡುತ್ತಿದ್ದು, ಅ.6ರಂದು ಪ್ರಿಯಾಂಕಾ ಗಾಂಧಿ ಕೂಡ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಮಂಡ್ಯ ಜಿಲ್ಲೆಯಲ್ಲಿ ಪ್ರಿಯಾಂಕ ಗಾಂಧಿ ಪಾದಯಾತ್ರೆ ನಡೆಸಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net