

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣ ಸಂಬಂಧ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನ ಬಂಧಿಸಬೇಕು ಎಂದು ಆಗ್ರಹಿಸಿ ಈಶ್ವರಪ್ಪರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಕಾಂಗ್ರೆಸ್ ಕಾರ್ಯಕರ್ತರು ಯೂತ್ ಕಾಂಗ್ರೆಸ್ ಮತ್ತು ಮಹಿಳಾ ಕಾಂಗ್ರೆಸ್ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದರು.
ಬೆಂಗಳೂರಿನ ಶಿವಾನಂದ ಸರ್ಕಲ್ ಬಳಿಯ ಗಾಂಧಿಭವನ ರಸ್ತೆಯಲ್ಲಿರುವ ಈಶ್ವರಪ್ಪರ ಸರ್ಕಾರಿ ನಿವಾಸಕ್ಕೆ ಯುವ ಕಾಂಗ್ರೆಸ್ ಮುಖಂಡ ಮನೋಹರ್ ನೇತೃತ್ವದ ತಂಡ ಮುತ್ತಿಗೆ ಹಾಕಲು ಯತ್ನಿಸಿತು. ಈಶ್ವರಪ್ಪ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಮುತ್ತಿಗೆ ಹಾಕಲು ಯತ್ನಿಸಿದವರನ್ನು ಪೊಲೀಸ್ ಜೀಪಿನಲ್ಲಿ ತುಂಬಿಕೊಂಡು ಹೋದರು.
‘ನನ್ನ ಸಾವಿಗೆ ಸಚಿವ ಕೆ.ಎಸ್. ಈಶ್ವರಪ್ಪ ಅವರೇ ಕಾರಣ. ಸಚಿವರಿಗೆ ಶಿಕ್ಷೆಯಾಗಬೇಕು, ನನ್ನೆಲ್ಲಾ ಆಸೆಗಳನ್ನ ಬದಿಗೊತ್ತಿ ಆತ್ಮಹತ್ಯೆಯ ನಿರ್ಧಾರ ಮಾಡಿದ್ದೇನೆ. ನನ್ನ ಹೆಂಡತಿ-ಮಕ್ಕಳಿಗೆ ಪ್ರಧಾನಿಗಳು, ಮುಖ್ಯಮಂತ್ರಿಗಳು, ಬಿ.ಎಸ್.ಯಡಿಯೂರಪ್ಪ ಸಹಾಯ ಮಾಡಬೇಕು’ ಎಂದು ಡೆತ್ನೋಟ್ ಬರೆದು ಸಂತೋಷ್ ಪಾಟೀಲ್ ಉಡುಪಿಯ ಶಾಂಭವಿ ಲಾಡ್ಜಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.