ಗದ್ದಲದ ನಡುವೆಯೂ ಮತಾಂತರ ನಿಷೇಧ ವಿಧೇಯಕ ಮಂಡನೆ

Belagavi
Published on

ಬೆಳಗಾವಿ: ಗದ್ದಲದ ನಡುವೆಯೂ ಮತಾಂತರ ನಿಷೇಧ ಕಾಯ್ದೆಯನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಮಂಡಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ಕಾಂಗ್ರೆಸ್​ ಮತ್ತು ಜೆಡಿಎಸ್​ನ ವಿರೋಧದ ನಡುವೆಯೂ ಮಂಗಳವಾರ ಮತಾಂತರ ನಿಷೇಧ ಕಾಯ್ದೆಯನ್ನು ಗೃಹ ಸಚಿವರು ಮಂಡಿಸಿದರು. ಈ ಕುರಿತು ಚರ್ಚಿಸಲು ನಾಳೆ ಅವಕಾಶ ಇದೆ ಎಂದು ಸ್ಪೀಕರ್​ ಹೇಳಿದರೂ ಕಾಂಗ್ರೆಸ್​ ಮತ್ತು ಜೆಡಿಎಸ್​ ಸದಸ್ಯರು ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ. ಸರ್ಕಾರ ಮೊದಲು ಮಸೂದೆ ಬಗ್ಗೆ ಮಾಹಿತಿ ನೀಡಬೇಕಿತ್ತು ಎಂದು ಆಕ್ರೋಶ ಹೊರ ಹಾಕುತ್ತಲೇ ಇದ್ದರು.

ಮತಾಂತರ ನಿಷೇಧ ಕಾಯ್ದೆ ರೂಪಿಸುವ ಉದ್ದೇಶದಿಂದ ಮಂಡಿಸಲಿರುವ ಮಸೂದೆಯನ್ನು ಯಾವುದೇ ಕಾರಣಕ್ಕೂ ವಿರೋಧಿಸಬೇಡಿ. ರಾಜ್ಯದ ಹಿತದೃಷ್ಟಿಯಿಂದ ಈ ಕಾಯ್ದೆಯನ್ನು ತರಲಾಗುತ್ತಿದೆ ಎಂದು ಮಾಜಿ ಸಿಎಂ ಬಿ.ಎಸ್​. ಯಡಿಯೂರಪ್ಪ ಮನವಿ ಮಾಡಿದ್ದಾರೆ.

ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಇಂದು ಮಂಡಿಸಲಿರುವ ಮತಾಂತರ ನಿಷೇಧ ಮಸೂದೆಯನ್ನು ವಿರೋಧಿಸುತ್ತೇವೆ ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ರಾಜ್ಯದಲ್ಲಿ ಅಶಾಂತಿ ಮೂಡಿಸಲು ಬಿಜೆಪಿಯವರು ಮತಾಂತರ ತಡೆ ಕಾಯ್ದೆ ತರುತ್ತಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ. ಮತಾಂತರ ನಿಷೇಧ ಕಾಯ್ದೆ ರಾಜ್ಯಕ್ಕೆ ಒಂದು ಕಪ್ಪು ಚುಕ್ಕೆ ಎಂದು ಡಿ.ಕೆ.ಶಿವಕುಮಾರ್​ ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net