

ಕೋಲಾರ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿದ್ದ ವ್ಯಕ್ತಿಯೊಬ್ಬನಿಗೆ ಜಿಲ್ಲಾ ಪೋಕ್ಸೋ ವಿಶೇಷ ನ್ಯಾಯಾಲಯ 30 ವರ್ಷ ಸಜೆ ಮತ್ತು 25 ಸಾವಿರ ರೂ. ದಂಡ ವಿಧಿಸಿದೆ.
ಷಾಹಿದ್ ನಗರದ ಮುನಾವರ್ ಅಲಿಯಾಸ್ ಮುನ್ನಾ ಶಿಕ್ಷೆಗೆ ಒಳಗಾದವ. ಮೇ 16ರಂದು ಅಪ್ರಾಪ್ತೆಯನ್ನು ಮನೆಗೆ ಕರೆದೊಯ್ದ ಮುನಾವರ್, ಜ್ಯೂಸ್ನಲ್ಲಿ ಮತ್ತು ಬರುವ ಪದಾರ್ಥ ಹಾಕಿಕೊಟ್ಟು ಪ್ರಜ್ಞೆ ತಪ್ಪಿಸಿ ಅತ್ಯಾಚಾರವೆಸಗಿದ್ದ. ಈ ಬಗ್ಗೆ ನಗರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪೋಕ್ಸೋಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು. ಆರೋಪಿ ವಿರುದ್ಧ ಠಾಣಾಧಿಕಾರಿ ತನಿಖೆ ನಡೆಸಿ ದೋಷಾರೋಷಣಾ ಪಟ್ಟಿ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಬಿ.ಪಿ.ದೇವಮಾನಿ ವಾದ ವಿವಾದ ಆಲಿಸಿದ ನಂತರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪೋಕ್ಸೋ ಕಲಂ 6ರಲ್ಲಿ 30 ವರ್ಷ ಸಜೆ, ಜತೆಗೆ 25 ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ತಪ್ಪಿದಲ್ಲಿ 1 ವರ್ಷ ಸಾದಾ ಸಜೆ ವಿಧಿಸಿ, ನೊಂದ ಬಾಲಕಿಗೆ 7 ಲಕ್ಷ ರೂ. ಪರಿಹಾರ ನೀಡುವಂತೆ ತೀರ್ಪು ನೀಡಿದ್ದಾರೆ. ವಿಶೇಷ ಸರ್ಕಾರಿ ಅಭಿಯೋಜಕಿ ಡಿ.ಲಲಿತಾಕುಮಾರಿ ವಾದ ಮಂಡಿಸಿದ್ದರು.