ಹಸಿದವರ ಹೊಟ್ಟೆ ತುಂಬಿಸುತ್ತಿದ್ದಾರೆ ಕನ್ನಡತಿ ಧಾರಾವಾಹಿ ನಟ ಕಿರಣ್​ ರಾಜ್​! ಕರೊನಾ ಸಂಕಷ್ಟಕ್ಕೆ ಮಿಡಿದ ನಟನಿಗೆ ಸಲಾಂ

kiran raj
Published on

ಬೆಂಗಳೂರು: ಕರೊನಾ ಲಾಕ್​ಡೌನ್​ ಹಿನ್ನೆಲೆ ಕೆಲಸ ಇಲ್ಲದೆ ಲೆಕ್ಕವಿಲ್ಲದಷ್ಟು ಮಂದಿ ಬದುಕಿನ ಬಂಡಿ ಸಾಗಿಸಲು ಹರಸಾಹಸ ಪಡುತ್ತಿದ್ದಾರೆ. ಹಲವರು ಒಂದೊತ್ತಿನ ಊಟಕ್ಕೂ ಪರದಾಡುತ್ತಿದ್ದಾರೆ. ಇಂತಹ ಸಂಕಷ್ಟ ಕಾಲದಲ್ಲಿ ಕನ್ನಡತಿ ಧಾರವಾಹಿ ಖ್ಯಾತಿಯ ನಟ ಕಿರಣ್ ರಾಜ್ ಅವರು ಹಸಿದವರ ಹೊಟ್ಟೆ ತುಂಬಿಸುವ ಕಾರ್ಯ ಮಾಡುತ್ತಾ ಮಾನವೀಯತೆ ಮೆರೆದಿದ್ದಾರೆ.

ಕಿರುತೆರೆ ನಟ ಕಿರಣ್ ರಾಜ್ ಮತ್ತು ತಂಡವು ಕಿರಣ್ ರಾಜ್ ಫೌಂಡೇಶನ್ ಮೂಲಕ ಬೆಂಗಳೂರಿನಾದ್ಯಂತ ಹಲವಡೆ ಹಸಿದವರಿಗೆ ಊಟ ನೀಡುತ್ತಿದ್ದಾರೆ. 'ಅನ್ನ ದೇವರಿಗಿಂತ ಇನ್ನು ದೇವರಿಲ್ಲ ಎಂಬ ಮಾತಿದೆ. ಕರೊನಾ ಸಂಕಷ್ಟದ ಪರಿಸ್ಥಿತಿಯಲ್ಲಿ ಕಿರಣ್ ಫೌಂಡೇಶನ್ ವತಿಯಿಂದ ಅವಶ್ಯಕತೆಯಿರುವ ಪ್ರತಿಯೊಬ್ಬರಿಗೂ ಪ್ರತಿನಿತ್ಯ ಎರಡು ಹೊತ್ತು ಊಟದ ವ್ಯವಸ್ಥೆಯನ್ನು ಮಾಡಲಾಗಿದೆ. ಸದ್ಬಳಕೆ ಮಾಡಿಕೊಳ್ಳಿ' ಎಂದು ಕಿರಣ್​ ರಾಜ್​ ಅವರು ಫೇಸ್​ಬುಕ್​ನಲ್ಲಿ ಬರೆದುಕೊಂಡಿದ್ದಾರೆ. ಅಲ್ಲದೆ, ಊಟ ವಿತರಣೆಯ ವಿಡಿಯೋವನ್ನೂ ಪೋಸ್ಟ್​ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net