ಅನಿತಾ ಕುಮಾರಸ್ವಾಮಿಗೆ ಕರೊನಾ ಪಾಸಿಟಿವ್​

anitha
Published on

ಬೆಂಗಳೂರು: ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಅವರ ಪತ್ನಿ, ಶಾಸಕಿ ಅನಿತಾ ಕುಮಾರಸ್ವಾಮಿಗೆ ಕರೊನಾ ಸೋಂಕು ದೃಢಪಟ್ಟಿದೆ.

ಶನಿವಾರ ಬೆಳಗ್ಗೆ ವರದಿಯಲ್ಲಿ ಕರೊನಾ ಪಾಸಿಟಿವ್​ ಬಂದಿದೆ. ಸದ್ಯ ಬೆಂಗಳೂರಿನ ನಿವಾಸದಲ್ಲೇ ಅನಿತಾ ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆಯುತ್ತಿದ್ದು, ಹೋಂ ಐಸೋಲೇಷನ್​ ಆಗಿದ್ದಾರೆ.

ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚತ್ತಲೇ ಇದ್ದು, ಹಲವು ರಾಜಕೀಯ ನಾಯಕರಿಗೂ ಸೋಂಕು ತಗುಲಿದೆ. ಸಿಎಂ ಬಸವರಾಜ ಬೊಮ್ಮಾಯಿ, ಕಾಂಗ್ರೆಸ್​ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ, ಸಚಿವ ಮಾಧುಸ್ವಾಮಿ, ಮಾಜಿ ಸಚಿವ ಎಚ್​.ಎಂ.ರೇವಣ್ಣ ಸೇರಿದಂತೆ ಹಲವರಿಗೆ ಕರೊನಾ ಸೋಂಕು ತಗುಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net