

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿಗೂ ಕರೊನಾ ಸೋಂಕು ತಗುಲಿದೆ.
ನಿನ್ನೆ(ಸೋಮವಾರ) ಸಿಎಂ ಬೊಮ್ಮಾಯಿ ಅವರಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಇದರ ಬೆನ್ನಲ್ಲೇ ಮಗನಿಗೂ ಸೋಂಕು ಇರುವುದು ಗೊತ್ತಾಗಿದೆ. ಸ್ವತಃ ಸಿಎಂ ಪುತ್ರ ಭರತ್ ಅವರೇ ಈ ಬಗ್ಗೆ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. 'ನನಗೂ ಕರೊನಾ ಪಾಸಿಟಿವ್ ಬಂದಿದೆ. ಸ್ವಲ್ಪ ಪ್ರಮಾಣದಲ್ಲಿ ರೋಗ ಲಕ್ಷಣ ಕಂಡು ಬಂದಿದ್ದು, ವೈದ್ಯರ ಸಲಹೆ ಮೇರೆಗೆ ಮನೆಯಲ್ಲೇ ಕ್ವಾರಂಟೈನ್ ಆಗಿರುವೆ. ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ಕರೊನಾ ಟೆಸ್ಟ್ ಮಾಡಿಸಿಕೊಳ್ಳುವ ಮೂಲಕ ಜಾಗ್ರತೆ ವಹಿಸಿ' ಎಂದು ಮನವಿ ಮಾಡಿದ್ದಾರೆ.
ಸಚಿವರಾದ ಬಿ.ಸಿ. ನಾಗೇಶ್, ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಂಸದ ಪಿ.ಸಿ. ಗದ್ದಿಗೌಡರ್ ಸೇರಿ ಮುಂತಾದ ಗಣ್ಯರಿಗೂ ಕರೊನಾ ಸೋಂಕು ತಗುಲಿದೆ.