

ನವದೆಹಲಿ: ಮಹಾಮಾರಿ ಕರೊನಾ 3ನೇ ಅಲೆ ಶರವೇಗ ಪಡೆದುಕೊಂಡಿದ್ದು, ರಾಜಕೀಯ, ಸಿನಿಮಾ, ವೈದ್ಯಕೀಯ, ಶಿಕ್ಷಣ ಸೇರಿದಂತೆ ಎಲ್ಲ ರಂಗವನ್ನೂ ಆವರಿಸಿದೆ. ಸೋಂಕಿತರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದ್ದು, ಕರ್ನಾಟಕ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ರಾಜನಾಥ್ ಸಿಂಗ್, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಹಲವು ನಾಯಕರಲ್ಲಿ ಕೋವಿಡ್ ದೃಢಪಟ್ಟಿದೆ. ಇವರ ಬೆನ್ನಿಗೇ ಇದೀಗ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೂ ಕರೊನಾ ಸೋಂಕು ತಗುಲಿದೆ.
ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ನಿನ್ನೆ(ಜ.11) ಕರೊನಾ ಪಾಸಿಟಿವ್ ಇದೆ ವರದಿಯಲ್ಲಿದೆ. ಈ ಬಗ್ಗೆ ಗಡ್ಕರಿ ಅವರೇ ನಿನ್ನೆ ರಾತ್ರಿ ಟ್ವೀಟ್ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. 'ನನಗೆ ಕರೊನಾ ಸೋಂಕಿನ ಸೌಮ್ಯ ಲಕ್ಷಣಗಳಿದ್ದು, ಸೋಂಕು ದೃಢಪಟ್ಟಿದೆ. ಸದ್ಯ ಮನೆಯಲ್ಲೇ ಕ್ವಾರಂಟೈನ್ ಆಗಿರುವೆ. ಇತ್ತೀಚಿಗೆ ನನ್ನ ಪ್ರಾಥಮಿಕ ಸಂಪರ್ಕಕ್ಕೆ ಬಂದ ಎಲ್ಲರೂ ಕರೊನಾ ಟೆಸ್ಟ್ ಮಾಡಿಸಿಕೊಳ್ಳುವ ಜತೆಗೆ ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ' ಎಂದಿದ್ದಾರೆ.
ಗಡ್ಕರಿ ಅವರಿಗೆ ಕಳೆದ ಸೆಪ್ಟಂಬರ್ನಲ್ಲಿ ಕರೊನಾ ಸೋಂಕು ತಗುಲಿತ್ತು. ಇದೀಗ ಮತ್ತೊಮ್ಮೆ ಸೋಂಕು ತಗುಲಿದೆ.