

ಮುಂಬೈ: ಭಾರತದ ಪ್ರಸಿದ್ಧ ಗಾಯಕಿ ಲತಾ ಮಂಗೇಶ್ಕರ್ ಅವರಿಗೆ ಕರೊನಾ ಸೋಂಕು ತಗುಲಿದ್ದು, ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ತೀವ್ರ ನಿಗಾ ಘಟಕದಲ್ಲಿ ಲತಾ ಮಂಗೇಶ್ಕರ್ ಅವರಿಗೆ ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದು, ಅವರ ಆರೋಗ್ಯ ಸಹಜ ಸ್ಥಿತಿಯಲ್ಲಿದೆ. ಆದರೆ, ಅವರಿಗೆ ವಯಸ್ಸಾಗಿರುವ ಕಾರಣ ಮುನ್ನೆಚ್ಚರಿಕೆಯಾಗಿ ಐಸಿಯುನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ.