

ದೆಹಲಿ: ಎಲ್ಲ ರಂಗದ, ಎಲ್ಲ ವರ್ಗದ, ಎಲ್ಲ ವಯೋಮಾನದವರನ್ನೂ ಬೆಂಬಿಡದೆ ಕಾಡುತ್ತಿರುವ ಕರೊನಾ ಸೋಂಕು ಇದೀಗ ದೆಹಲಿ ಲೆಫ್ಟಿನೆಂಟ್ ಗವರ್ನರ್ ಅವರಿಗೂ ತಗುಲಿದೆ.
ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಲ್ ಅವರಿಗೆ ಶುಕ್ರವಾರ ಕರೊನಾ ಪಾಸಿಟಿವ್ ದೃಢಪಟ್ಟಿದ್ದು, ಈ ಬಗ್ಗೆ ಸ್ವತಃ ಅವರೇ ಟ್ವೀಟರ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ಕರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದೇನೆ. ಮನೆಯಲ್ಲಿದ್ದುಕೊಂಡೇ ಕೆಲಸ ನಿರ್ವಹಿಸುವೆ ಎಂದು ಅನಿಲ್ ಬೈಜಲ್ ತಿಳಿಸಿದ್ದಾರೆ.