ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿ ಮೃತದೇಹ ಪತ್ತೆ

Published on

ಬೆಂಗಳೂರು: ಕೆ.ಎಚ್. ರಸ್ತೆಯ ಬಳಿಯ ನಿರ್ಮಾಣ ಹಂತದ ಕಟ್ಟಡದಲ್ಲಿ ಯುವತಿ ಮೃತದೇಹ ಅನುಮಾನಾಸ್ಪದವಾಗಿ ಪತ್ತೆಯಾಗಿದೆ.
ಸ್ಥಳಕ್ಕೆ ಸಂಪಂಗಿರಾಮನಗರ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ಯುವತಿಯ ಹೆಸರು, ವಿಳಾಸ ಪತ್ತೆಯಾಗಿಲ್ಲ. ಯುವತಿಗೆ ಅಂದಾಜು ೨೫ ರಿಂದ ೨೬ ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಕಟ್ಟಡವನ್ನು ನಿರ್ಮಾಣ ಮಾಡಿ ಹಾಗೆಯೇ ಬಿಡಲಾಗಿತ್ತು. ಇದೇ ಕಟ್ಟಡದಲ್ಲಿ ಮೃತದೇಹ ಪತ್ತೆಯಾಗಿದೆ. ಯುವತಿ ತಲೆ ಮೇಲೆ ಗಾಯವಾಗಿದ್ದು, ಆಯಾ ತಪ್ಪಿ ಬಿದ್ದು ತಲೆಗೆ ಪೆಟ್ಟಾಗಿ ಮೃತಪಟ್ಟಿರುವ ಸಾಧ್ಯತೆಯಿದೆ ಎಂಬ ಶಂಕೆ ವ್ಯಕ್ತವಾಗಿದೆ. ಕೊಲೆ ಮಾಡಲಾಗಿದ್ದೀಯೇ ಸೇರಿ ಎಲ್ಲ ಆಯಾಮದಲ್ಲೂ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net