ದೀಪಾವಳಿ ಹಬ್ಬದಲ್ಲೂ ವರುಣ ಆರ್ಭಟ: 2 ದಿನ ಭಾರಿ ಮಳೆ

14072021 Bellary Rain
Published on

ಬೆಂಗಳೂರು: ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಶಿವಮೊಗ್ಗದಲ್ಲಿ ನ.4ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೆ ಸುಳಿಗಾಳಿ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಮುಂದುವರಿದಿದೆ. ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ ಮತ್ತು ಕೊಪ್ಪಳದಲ್ಲಿ ಮುಂದಿನ 2 ದಿನ ಯೆಲ್ಲೋ ಅರ್ಲಟ್​ ಇರಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net