

ದೆಹಲಿ: ತಮಿಳುನಾಡಿನ ಕೂನೂರಿನಲ್ಲಿ ಸೇನಾ ಹೆಲಿಕಾಪ್ಟರ್ ಪತನಗೊಂಡ ಬೆನ್ನಲ್ಲೇ ಭಾರತೀಯ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ನಿವಾಸಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಭೇಟಿ ನೀಡಿದ್ದಾರೆ.
ಬಿಪಿನ್ ರಾವತ್ರ ನಿವಾಸ ದೆಹಲಿಯ ಕೆ.ಕಾಮರಾಜ್ ಮಾರ್ಗದಲ್ಲಿದೆ. ಹೆಲಿಕಾಪ್ಟರ್ ಪತನ ಕುರಿತು ಕುಟುಂಬಸ್ಥರಿಗೆ ಸಚಿವರು ಮಾಹಿತಿ ಕೊಡುತ್ತಾ, ಧೈರ್ಯ ತುಂಬಿದ್ದಾರೆ. ಅಲ್ಲಿಂದ ಘಟನಾ ಸ್ಥಳಕ್ಕೆ ತೆರಳಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬಿಪಿನ್ ರಾವತ್ ಸೇರಿ 14 ಮಂದಿ ಪ್ರಯಾಣಿಸುತ್ತಿದ್ದವರ ಪೈಕಿ 11 ಮಂದಿ ಮೃತಪಟ್ಟಿದ್ದು, ಬಿಪಿನ್ ರಾವತ್ ಸೇರಿ ಮೂವರ ಸ್ಥಿತಿ ಚಿಂತಾಜನಕವಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ನಾಳೆ(ಗುರುವಾರ) ಸಂಸತ್ಗೆ ವಿವರ ಕೊಡಲಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ. ಈಗಾಗಲೇ ತಮಿಳುನಾಡು ಸಿಎಂ ಸ್ಟಾಲಿನ್ ಸ್ಥಳಕ್ಕೆ ಭೇಟಿ ಕೊಟ್ಟಿದ್ದಾರೆ.