ಉಡುಪಿ ಜಿಲ್ಲೆಯಲ್ಲಿ ಡೆಂಘೆ ಪ್ರಕರಣ ಹೆಚ್ಚಳ: ಜಡ್ಕಲ್-ಮುದೂರಲ್ಲಿ ಶಾಲೆಗೆ 10 ದಿನ ರಜೆ

Denghe
Published on

ಉಡುಪಿ: ಜಿಲ್ಲೆಯಲ್ಲಿ 136 ಡೆಂಘೆ ಪ್ರಕರಣ ದಾಖಲಾಗಿದ್ದು, ಜನರದಲ್ಲಿ ಆತಂಕ ಮೂಡಿಸಿದೆ. ಬೈಂದೂರು ತಾಲೂಕು ವ್ಯಾಪ್ತಿಯ ಜಡ್ಕಲ್ ಮುದೂರು ಗ್ರಾಮದಲ್ಲಿ ಮುಂಜಾಗ್ರತಾ ಕ್ರಮವಾಗಿ ಶಾಲೆಗೆ 10 ದಿನ ರಜೆ ಘೋಷಿಸಲಾಗಿದೆ.

ಕೊಲ್ಲೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ 114 ಡೆಂಘೆ ಪ್ರಕರಣಗಳು ಪತ್ತೆಯಾಗಿದೆ. ಈ ವ್ಯಾಪ್ತಿಯ ಮುದೂರು ಗ್ರಾಮದಲ್ಲಿ 105, ಜಡ್ಕಲ್​ನಲ್ಲಿ 7 ಪ್ರಕರಣ ಕಂಡು ಬಂದಿದೆ. ಕೊಲ್ಲೂರಿನಲ್ಲಿ ಇಬ್ಬರಿಗೆ ಡೆಂಘೆ ದೃಢಪಟ್ಟಿದೆ.

ಜಡ್ಕಲ್ ಮುದೂರು ಭಾಗದಲ್ಲಿ ನಿರಂತರವಾಗಿ ಡೆಂಘೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸ್ಥಳೀಯ ಶಾಸಕ ಸುಕುಮಾರ್ ಶೆಟ್ಟಿ ಮತ್ತು ಜಿಲ್ಲಾಧಿಕಾರಿ ಕೂರ್ಮರಾಮ್ ಮುಂಜಾಗ್ರತಾ ಕ್ರಮದ ಬಗ್ಗೆ ಚರ್ಚಿಸಿದ ಬಳಿಕ ಮೇ 19ರಿಂದ 28ರವರೆಗೆ ರಜೆ ಘೋಷಿಸಲಾಗಿದೆ. ಈ ಭಾಗದ ಪ್ರತಿ ಮನೆಗೂ ಆರೋಗ್ಯ ಸಿಬ್ಬಂದಿ ಭೇಟಿ ನೀಡುತ್ತಿದ್ದು, ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳಲು, ನೈರ್ಮಲ್ಯಕ್ಕೆ ಆದ್ಯತೆ ನೀಡುವಂತೆ ಅರಿವು ಮೂಡಿಸುತ್ತಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net