ಮೇಕೆದಾಟು ಪಾದಯಾತ್ರೆ: ಕೋವಿಡ್ ಪರೀಕ್ಷೆ ನಿರಾಕರಿಸಿದ ಡಿಕೆಶಿ

mekedatu padayatre
Published on

ರಾಮನಗರ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಭಾನುವಾರ ರಾತ್ರಿ ಆರೋಗ್ಯ ಇಲಾಖೆ ಕೋವಿಡ್ ಪರೀಕ್ಷೆಗೆ ಮುಂದಾಗಿದ್ದು, ಶಿವಕುಮಾರ್ ಅದನ್ನು ನಿರಾಕರಿಸಿದರು.

ಮೊದಲ ದಿನದ ಮೇಕೆದಾಟು ಪಾದಯಾತ್ರೆ ಮುಗಿಸಿ ಡಿಕೆಶಿ ತಮ್ಮ ಊರಾದ ದೊಡ್ಡಾಲಹಳ್ಳಿಯಲ್ಲಿ ಭಾನುವಾರ ರಾತ್ರಿ ತಂಗಿದ್ದರು. ಈ ವೇಳೆ ಅಲ್ಲಿಗೆ ಬಂದ ರಾಮನಗರ ಹೆಚ್ಚುವರಿ ಜವರೇಗೌಡ ನೇತೃತ್ವದ ಅಧಿಕಾರಿಗಳ ತಂಡವು, ಕೋವಿಡ್ ಪರೀಕ್ಷೆ ಮಾಡಿಸಿಕೊಳ್ಳುವಂತೆ ಒತ್ತಾಯಿಸಿತು.

ಆದರೆ ಇದನ್ನು ನಿರಾಕರಿಸಿದ ಡಿಕೆಶಿ, ನನಗೆ ಯಾವ ರೋಗ ಲಕ್ಷಣಗಳೂ ಇಲ್ಲ. ಹೀಗಾಗಿ ಪರೀಕ್ಷೆ ಮಾಡಿಸಿಕೊಳ್ಳುವುದಿಲ್ಲ ಎಂದು ಹೇಳಿ ಅಧಿಕಾರಿಗಳನ್ನು ವಾಪಸ್ ಕಳುಹಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net