ಕುಡಿದ ಮತ್ತಿನಲ್ಲಿ ನನ್ನನ್ನು ರೇಪ್​ ಮಾಡಿ ಎಂದು ನಡು ರಸ್ತೆಯಲ್ಲೇ ರಂಪಾಟ ಮಾಡಿದ ಯುವತಿ! ವಿಡಿಯೋ ವೈರಲ್​...Drunk Young Woman

Drunk Young Woman
Published on

ಡೆಹ್ರಾಡೂನ್​: ದೇವರುಗಳ ನಾಡು ಎಂದು ಕರೆಯಲ್ಪಡುವ ಉತ್ತರಾಖಂಡಕ್ಕೆ ಪ್ರವಾಸ ಹೋಗುವ ಕೆಲ ಯುವಕ/ಯುವತಿಯರು ( Drunk Young Woman ) ನೀಚ ಕೃತ್ಯಗಳನ್ನು ಎಸಗುತ್ತಿದ್ದಾರೆ. ಮದ್ಯ ಸೇವಿಸಿ ನಡು ರಸ್ತೆಗಳಲ್ಲೇ ಗಲಾಟೆ ಮಾಡುವ ಮೂಲಕ ಆಧ್ಯಾತ್ಮಿಕ ಸ್ಥಳವೆಂದು ಕರೆಯಲ್ಪಡುವ ರಾಜ್ಯದ ಖ್ಯಾತಿಗೆ ಧಕ್ಕೆ ತರುತ್ತಿದ್ದಾರೆ. ಸದ್ಯ ವೈರಲ್​ ಆಗುತ್ತಿರುವ ವಿಡಿಯೋ ಇದಕ್ಕೆ ತಾಜಾ ಉದಾಹರಣೆಯಂತಿದೆ.

ಇತ್ತೀಚೆಗೆ, ಉತ್ತರಾಖಂಡದ ಋಷಿಕೇಶದಲ್ಲಿ, ಯುವತಿಯೊಬ್ಬಳು ಕುಡಿದು ಮತ್ತಿನಲ್ಲಿ ರಸ್ತೆಯಲ್ಲೇ ಹೈಡ್ರಾಮ ಮಾಡಿದ್ದಾಳೆ. ನನ್ನನ್ನು ರೇಪ್​ ಮಾಡಿ ಎಂದು ರಸ್ತೆಯಲ್ಲೇ ಕೂಗಾಡಿ ರಂಪಾಟ ಮಾಡಿದ್ದಾಳೆ. ಇದರಿಂದಾಗಿ, ರಸ್ತೆಯಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಇದಕ್ಕೆ ಸಂಬಂಧಿಸಿದ ವಿಡಿಯೋ ಸದ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ.

ವಿಡಿಯೋದಲ್ಲಿ ಏನಿದೆ?

ಕುಡಿದ ಮತ್ತಿನಲ್ಲಿ ಯುವಕರ ಗುಂಪೊಂದು ರಸ್ತೆಯಲ್ಲಿ ಗಲಾಟೆ ಮಾಡುತ್ತಿತ್ತು. ಈ ಗ್ಯಾಂಗ್‌ನಲ್ಲಿದ್ದ ಯುವತಿಯೊಬ್ಬಳು ಕಂಠಪೂರ್ತಿ ಕುಡಿದು ಸರಿಯಾಗಿ ನಡೆಯಲು ಆಗದೇ ಮದ್ಯದಲ್ಲಿ ತೇಲುತ್ತಿದ್ದಳು. ಅಲ್ಲದೆ, ನನ್ನ ಮೇಲೆ ಅತ್ಯಾಚಾರ ಮಾಡಿ ಅಂತ ವಿಡಿಯೋ ರೆಕಾರ್ಡ್​ ಮಾಡುತ್ತಿದ್ದವರ ಮೇಲೆ ಕೂಗಾಡಿ, ವಾಗ್ವಾದಕ್ಕೆ ಇಳಿದಳು. ಬಳಿಕ ಯುವಕನೊಬ್ಬ ಆಕೆಯನ್ನು ಎಳೆದುಕೊಂಡು ಸುಮ್ಮನಿರಲು ಹೇಳುತ್ತಾನೆ. ಈ ವೇಳೆ ಅಲ್ಲಿದ್ದ ಅನೇಕರು ತಮ್ಮ ಮೊಬೈಲ್​ ಕ್ಯಾಮೆರಾಗಳಲ್ಲಿ ವಿಡಿಯೋ ರೆಕಾರ್ಡ್​ ಮಾಡುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು.

ಸದ್ಯ ವಿಡಿಯೋ ವೈರಲ್​ ಆಗಿದ್ದು, ಯುವತಿಯ ವರ್ತನೆಯ ಬಗ್ಗೆ ನೆಟ್ಟಿಗರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಅಲ್ಲದೆ, ಯುವಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ. ಆದರೆ, ಯಾವ ವಿಚಾರಕ್ಕೆ ರಸ್ತೆಯಲ್ಲಿ ಜಗಳ ಆಡಿದ್ದಾರೆ ಎಂಬುದು ಬಹಿರಂಗವಾಗಿಲ್ಲ. ಆದರೆ, ಅತಿಯಾಗಿ ಮದ್ಯಪಾನ ಮಾಡಿ ಯುವ ಗ್ಯಾಂಗ್​ನಿಂದಲೇ ಕಿತಾಪತಿ ನಡೆದಿದೆ ಎನ್ನಲಾಗುತ್ತಿದೆ. ಅಲ್ಲದೆ, ಮದ್ಯದ ಅಮಲಿನಲ್ಲಿ ರಸ್ತೆಯಲ್ಲಿ ನಿಂತು ವಾಹನ ಸವಾರರಿಗೆ ತೊಂದರೆ ಕೊಡುತ್ತಿದ್ದರು ಎಂದು ತಿಳಿದುಬಂದಿದೆ.

ವಿಡಿಯೋ ವೈರಲ್​ ಆಗುತ್ತಿದ್ದಂತೆ ಅನೇಕ ಮಂದಿ ಕಾಮೆಂಟ್​ ಮೂಲಕ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುತ್ತಿದ್ದಾರೆ. ಕೆಲವರು ವೀವ್ಸ್​ಗಾಗಿ ಇಂತಹ ವಿಡಿಯೋಗಳನ್ನು ಮಾಡಿದರೆ, ಇನ್ನು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಜನಪ್ರಿಯರಾಗಲು ಇಂತಹ ಹುಚ್ಚಾಟ ಮೆರೆಯುತ್ತಾರೆ ಎಂದು ಕೆಲ ನೆಟ್ಟಿಗರು ಕಾಮೆಂಟ್ ಮಾಡಿದ್ದಾರೆ.

ದೇವಾಲಯಗಳು ಮತ್ತು ಪ್ರಸಿದ್ಧ ಪೂಜಾ ಸ್ಥಳಗಳಲ್ಲಿ ರೀಲ್‌ಗಳನ್ನು ಮಾಡುವುದನ್ನು ನಾವು ನೋಡಿದ್ದೇವೆ. ಪವಿತ್ರ ಕ್ಷೇತ್ರಗಳಲ್ಲಿ ಯುವಕರು ಈ ರೀತಿ ವರ್ತಿಸುತ್ತಿರುವುದು ತುಂಬಾ ಕಳವಳಕಾರಿಯಾಗಿದೆ. ಈ ಬಗ್ಗೆ ಅಧಿಕಾರಿಗಳು, ಪೊಲೀಸರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಕ್ರಮ ಕೈಗೊಳ್ಳಬೇಕೆಂದು ನೆಟ್ಟಿಗರು ಒತ್ತಾಯಿಸುತ್ತಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net