

ವಿಜಯನಗರ: ಕೂಡ್ಲಿಗಿ ಕ್ಷೇತ್ರದ ಮಾಜಿ ಶಾಸಕ ಎನ್.ಟಿ.ಬೊಮ್ಮಣ್ಣ ಬುಧವಾರ ನಿಧನರಾದರು. 20 ದಿನಗಳ ಹಿಂದೆ ಪಾರ್ಶ್ವವಾಯುಗೆ ತುತ್ತಾಗಿದ್ದ ಬೊಮ್ಮಣ್ಣ ಅವರಿಗೆ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಚಿಕಿತ್ಸೆ ಫಲಿಸದೆ ಇಂದು ಕೊನೆಯುಸಿರೆಳೆದರು.
ಗುರುವಾರ ಕೂಡ್ಲಿಗಿ ತಾಲೂಕಿನ ಸ್ವಗ್ರಾಮ ನರಸಿಂಹಗಿರಿಯಲ್ಲಿ ಬೊಮ್ಮಣ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಮೃತರು ಪತ್ನಿ, ಇಬ್ಬರು ಪುತ್ರರು, ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು- ಬಳಗವನ್ನ ಅಗಲಿದ್ದಾರೆ
1985ರಿಂದ 1994ರವರೆಗೆ ಬೊಮ್ಮಣ್ಣ ಕೂಡ್ಲಿಗಿ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿದ್ದರು. 2018ರಲ್ಲಿ ಜೆಡಿಎಸ್ನಿಂದ ಸ್ಪರ್ಧಿಸಿದ್ದ ಅವರು ಸೋಲು ಅನುಭವಿಸಿದ್ದರು.