

ರಾಯಚೂರು: ಮಾಜಿ ಸಂಸದ ದಿ. ಎ.ವೆಂಕಟೇಶ್ ನಾಯಕ್ ಅವರ ಧರ್ಮಪತ್ನಿ ಸಾವಿತ್ರಿ ದೇವಿ(80) ಅವರು ಗುರುವಾರ ನಿಧನರಾದರು.
ಅನಾರೋಗ್ಯದಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ನಿಧನರಾದರು. ದೇವದುರ್ಗ ತಾಲೂಕಿನ ಅರಕೇರಾ ಗ್ರಾಮದಲ್ಲಿ ಶುಕ್ರವಾರ ಬೆಳಗ್ಗೆ 11 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.