ಡೆಂಘೆ ಜ್ವರಕ್ಕೆ ಕೃಷಿಕ ಬಲಿ!

denghu
Published on

ಬೆಳ್ತಂಗಡಿ(ದ.ಕ.): ಎಲ್ಲೆಡೆ ಕರೊನಾ ಅಟ್ಟಹಾಸ ಮೆರೆಯುತ್ತಿದ್ದು, ಸಾವು-ನೋವಿನ ಪ್ರಕರಣ ದಿನೇದಿನೆ ಹೆಚ್ಚಾಗುತ್ತಿದೆ. ಈ ನಡುವೆ ರಾಜ್ಯದಲ್ಲಿ ಮತ್ತೆ ಡೆಂಘೆ ಕಾಣಿಸಿಕೊಂಡಿದ್ದು, ಮತ್ತಷ್ಟು ಆತಂಕ ತಂದಿದೆ.

ಕಡಿರುದ್ಯಾವರ ಗ್ರಾಮದ ಆಲಂದಡ್ಕ ನಿವಾಸಿ ವಿನಾಯಕ ಪ್ರಭು(60) ಡೆಂಘೆ ಜ್ವರಕ್ಕೆ ಬಲಿಯಾಗಿದ್ದಾರೆ. ಇವರಿಗೆ ತೀವ್ರ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಮಂಗಳವಾರ ಮೃತಪಟ್ಟಿದ್ದಾರೆ.

ವಿನಾಯಕ ಪ್ರಭು ಕೃಷಿಕರಾಗಿದ್ದು, ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದ್ದರು. ಮೃತರಿಗೆ ತಾಯಿ, ಪತ್ನಿ, ಓರ್ವ ಪುತ್ರಿ, ಓರ್ವ ಪುತ್ರ ಇದ್ದಾರೆ. ಮರಣಮೃದಂಗ ಬಾರಿಸುತ್ತಿರುವ ಕರೊನಾ ಸೋಂಕಿನ ಭೀಕರತೆಗೆ ಜನತೆ ಹೈರಾಣಾಗಿದ್ದಾರೆ. ಈಗ ಡೆಂಘೆಯಿಂದಲೂ ಸಾವಿನ ಪ್ರಕರಣ ದಾಖಲಾಗುತ್ತಿರುವುದು ಮತ್ತಷ್ಟು ಆತಂಕ ಹೆಚ್ಚಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net