

ಚಾಮರಾಜನಗರ: ವಿಚಿತ್ರ ಪ್ರತಿಭಟನೆಗೆ ಚಾಮರಾಜನಗರ ಜಿಲ್ಲಾಡಳಿತ ಭವನ ಗುರುವಾರ ಸಾಕ್ಷಿಯಾಗಿದೆ. ರೈತರ ವಿರುದ್ಧವೇ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ.
ರೈತ ಸಂಘಟನೆಗಳ ಬಗ್ಗೆ ಕುಂತೂರು ಬಣ್ಣಾರಿ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಶರವಣ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎಂದು ಗರಂ ಆದ ಕಬ್ಬು ಬೆಳೆಗಾರರು ಮತ್ತು ರೈತ ಸಂಘಟನೆಗಳು ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕಿದರು.
ಇದಕ್ಕೆ ವಿರುದ್ಧವಾಗಿ ಕುಂತೂರು ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷನ ಪರ 500ಕ್ಕೂ ಹೆಚ್ಚು ರೈತರು ಕೈಯಲ್ಲಿ ಕಬ್ಬು ಹಿಡಿದು ಪ್ರತಿಭಟನಾ ಮೆರವಣಿಗೆ ನಡೆಸಿದರು. ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.