ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಜಗಳ: ಯುವಕನಿಗೆ ಚಾಕುವಿನಿಂದ ಇರಿ

Crime Logo
Published on

ಬೆಂಗಳೂರು: ಯುವತಿಯನ್ನು ಪ್ರೀತಿಸುವ ವಿಚಾರಕ್ಕೆ ಜಗಳವಾಗಿ ಓರ್ವ ಯುವಕನಿಗೆ ಚಾಕುವಿನಿಂದ ಇರಿಯಲಾಗಿದೆ.

ವಿಜಯನಗರ ನಿವಾಸಿ ಯತೀಶ್ (೨೫)ಆರೋಪಿ. ಚಂದನ್(೨೨) ಚಾಕು ಇರಿತದಿಂದ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈಯಾಲಿಕಾವಲ್ ಪೊಲೀಸ್ ಠಾಣಾ ವ್ಯಾಪ್ತಿಯ ಪ್ಯಾಲೇಸ್ ಗುಟ್ಟಹಳ್ಳಿ ಸರ್ಕಲ್‌ನಲ್ಲಿ ಆ.೧೫ ರಂದು ಈ ಘಟನೆ ನಡೆದಿದ್ದು, ಈ ಸಂಬಂಧ ಚಂದನ್ ಸಂಬಂಧಿ ಪ್ರಜ್ವಲ್ ನೀಡಿದ್ದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳಿಗಾಗಿ ಶೋಧ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಾಳು ಚಂದನ್ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದು, ಯುವತಿ ಕೂಡ ಚಂದನ್‌ನನ್ನು ಪ್ರೀತಿಸುತ್ತಿದ್ದಾರೆ ಎನ್ನಲಾಗಿದೆ. ಇದೇ ಯುವತಿ ಚಂದನ್‌ಗಿಂತ ಮೊದಲು ಆರೋಪಿ ಯತೀಶ್‌ನನ್ನು ಪ್ರೀತಿಸುತ್ತಿದ್ದಳು. ಯತೀಶ್‌ನೊಂದಿಗೆ ಬ್ರೇಕ್‌ಅಪ್ ಮಾಡಿಕೊಂಡು, ನಂತರ ಚಂದನ್‌ನನ್ನು ಪ್ರೀತಿಸುತ್ತಿದ್ದಾರೆ. ಈ ವಿಚಾರ ಯುವತಿಯ ಮಾಜಿ ಪ್ರಿಯಕರನಾದ ಯತೀಶ್‌ಗೆ ಗೊತ್ತಾಗಿತ್ತು. ಹೀಗಾಗಿ ಆರೋಪಿ ಯತೀಶ್ ಹಾಗೂ ಈತನ ಸಹಚರರು ಆ.೧೫ ರ ರಾತ್ರಿ ೯.೩೦ ರ ವೇಳೆ ಚಂದನ್‌ನನ್ನು ಮಾತನಾಡಲು ಪ್ಯಾಲೇಸ್ ಗುಟ್ಟಹಳ್ಳಿಯ ಜಟಕ ಸ್ಟಾೃಂಡ್ ಬಳಿ ಕರೆಸಿಕೊಂಡು ಚಾಕುವಿನಿಂದ ಹಿರಿದಿದ್ದರು. ಕೂಡಲೇ ಚಂದನ್ ತನ್ನ ತನ್ನ ಸಂಬಂಧಿ ಪ್ರಜ್ವಲ್‌ಗೆ ಕರೆ ಮಾಡಿ ವಿಚಾರ ತಿಳಿಸಿದ್ದ. ಘಟನಾ ಸ್ಥಳಕ್ಕೆ ತೆರಳಿದ ಪ್ರಜ್ವಲ್ ಮತ್ತು ಆತನ ಸ್ನೇಹಿತರು, ಆತನನ್ನು ರಕ್ಷಣೆ ಮಾಡಿದ್ದಾರೆ. ಸದ್ಯ ಚಾಕು ಹಿರಿತಕ್ಕೊಳಗಾದ ಗಾಯಾಳು ಚಂದನ್ ಸ್ಥಿತಿ ಗಂಭೀರವಾಗಿದೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ವೈಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ಕೊಲೆಯತ್ನ ಪ್ರಕರಣ ದಾಖಲಾಗಿದ್ದು ಆರೋಪಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net