ದುನಿಯಾ ವಿಜಯ್​ ತಂದೆ ನಿಧನ, 3 ತಿಂಗಳ ಅಂತರದಲ್ಲಿ ಅಪ್ಪ-ಅಮ್ಮನನ್ನು ಕಳೆದುಕೊಂಡ ನಟ

DUNIYA VIJAY
Published on

ಬೆಂಗಳೂರು: ಸ್ಯಾಂಡಲ್​ವುಡ್​ ನಟ ದುನಿಯಾ ವಿಜಯ್​ ಅವರ ತಂದೆ ರುದ್ರಪ್ಪ ನಿಧನರಾದರು. ಇವರಿಗೆ 81 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ರುದ್ರಪ್ಪ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಗುರುವಾರ ಬೆಳಗ್ಗೆ 7.30ಕ್ಕೆ ಆಸ್ಪತ್ರೆಯಲ್ಲೇ ರುದ್ರಪ್ಪ ಕೊನೆಯುಸಿರೆಳೆದಿದ್ದಾರೆ. ಮೃತರ ಅಂತ್ಯಕ್ರಿಯೆ ಅನೇಕಲ್​ನ ಕುಂಬಾರಹಳ್ಳಿಯಲ್ಲಿ ಇಂದು ಸಂಜೆ ನಡೆಯಲಿದೆ ಕುಟುಂಬದ ಮೂಲಗಳು ತಿಳಿಸಿವೆ.

ಕೆಲ ತಿಂಗಳ ಹಿಂದಷ್ಟೇ ಅಮ್ಮನನ್ನು ಕಳೆದುಕೊಂಡು ದುಃಖದಲ್ಲಿದ್ದ ದುನಿಯಾ ವಿಜಯ್​ ಅವರಿಗೆ ಇದೀಗ ಪಿತೃವಿಯೋಗ ಮತ್ತಷ್ಟು ನೋವಿನ ಕೂಪಕ್ಕೆ ತಳ್ಳಿದೆ. ಕಳೆದ ಜುಲೈ 8ರಂದು ದುನಿಯಾ ವಿಜಯ್ ಅವರ ತಾಯಿ ನಾರಾಯಣಮ್ಮ ನಿಧನರಾಗಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net