

ಉತ್ತರಕನ್ನಡ: ಭಟ್ಕಳ ಪಟ್ಟಣದಲ್ಲಿ ಪ್ರಧಾನ ಮತ್ತು ಹೆಚ್ಚುವರಿ ಸಿವಿಲ್ ಹಾಗೂ ಜೆಎಂಎಫ್ಸಿ ನ್ಯಾಯಾಲಯಗಳ ಸಂಕೀರ್ಣ ಕಟ್ಟಡದಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಶುಕ್ರವಾರ ನಸುಕಿನಲ್ಲಿ ಶಾರ್ಟ್ ಸರ್ಕ್ಯೂಟ್ನಿಂದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬೆಂಕಿಯ ಕೆನ್ನಾಲಿಗೆಗೆ ಹಲವಾರು ದಾಖಲಾತಿಗಳು ಸುಟ್ಟು ಬೂದಿಯಾಗಿವೆ. ಸ್ಥಳಕ್ಕೆ ಬಂದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಿದರು. ಸುದ್ದಿ ತಿಳಿಯುತ್ತಿದ್ದಂತೆ ಹಿರಿಯ ಸಿವಿಲ್ ನ್ಯಾಯಾಧೀಶ ಜಗದೀಶ ಶಿವಪೂಜಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಭಟ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.