

ಬೆಂಗಳೂರು: ಶಾರ್ಟ್ ಸರ್ಕ್ಯೂಟ್‌ನಿಂದ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್ನಲ್ಲಿ ನಡೆದಿದೆ.
ಬಿಎಂಟಿಸಿ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ಅವಘಡ ತಪ್ಪಿದೆ. 9 ಮಂದಿ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನೆಲಮಂಗಲ ಟೌನ್ ಇನ್ಸ್‌ಪೆಕ್ಟರ್ ಶಶಿಧರ್ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.
ನೆಲಮಂಗಲದಿಂದ ಮೆಜೆಸ್ಟಿಕ್‌ಗೆ ಸಂಚರಿಸುತ್ತಿದ್ದ ಬಸ್‌ನ ಬ್ಯಾಟರಿಯಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಹತ್ತಿಕೊಂಡಿದ್ದು, ಕೂಡಲೇ ಬಸ್ ಚಾಲಕ ಸೋಮಶೇಖರ್ ಅವರು ಬೆಂಕಿ ನಂದಿಸಿದ್ದಾರೆ.