ಉತ್ತರ ಕರ್ನಾಟಕಕ್ಕೆ ವರುಣಾಘಾತ: ಪ್ರವಾಹ ಎದುರಿಸಲು ಸಿಎಂ ಬಿಎಸ್​ವೈ ಮಹತ್ವದ ಸಭೆ

bsy meeting
Published on

ಬೆಂಗಳೂರು: ಮಹಾರಾಷ್ಟ್ರ ಮತ್ತು ಉತ್ತರ ಕರ್ನಾಟಕ ಭಾಗದಲ್ಲಿ ವರುಣನ ಅಬ್ಬರ ಜೋರಾಗಿದ್ದು, ಪ್ರವಾಹ ಭೀತಿ ಆವರಿಸಿದೆ. ಈ ಹಿನ್ನೆಲ್ಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯಗಳ ಜಲಸಂಪನ್ಮೂಲ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಗೃಹ ಕಚೇರಿ ಕೃಷ್ಣಾದಲ್ಲಿ ಶನಿವಾರ ಮಹತ್ವದ ಸಭೆ ನಡೆಸಿದರು.

ಉತ್ತರ ಕರ್ನಾಟಕದ ಪ್ರಮುಖ ನದಿಗಳಾದ ಕೃಷ್ಣಾ ಮತ್ತು ಭೀಮಾ ನದಿಗಳ ಕಣಿವೆಯಲ್ಲಿ ಪ್ರವಾಹ ನಿಯಂತ್ರಣ ಮತ್ತು ನಿರ್ವಹಣೆ ಹಾಗೂ ಮಳೆಗಾಲದಲ್ಲಿ ಸಂಭವಿಸಬಹುದಾದ ಅತಿವೃಷ್ಟಿ ತಡೆ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.

ಗೃಹ ಸಚಿವ ಬಸವರಾಜ ಬೊಮ್ಮಾಯಿ, ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಸಚಿವ ಜಯಂತ್ ಪಾಟೀಲ್‌, ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದ ಜಲಸಂಪನ್ಮೂಲ ಇಲಾಖೆ ಅಧಿಕಾರಿಗಳು, ರಾಜ್ಯದ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್, ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ) ಪ್ರಧಾನ ಕಾರ್ಯದರ್ಶಿ ಮಂಜುನಾಥ ಪ್ರಸಾದ್, ಜಲಸಂಪನ್ಮೂಲ ಇಲಾಖೆ ಕಾರ್ಯದರ್ಶಿ ಲಕ್ಷ್ಮಣ ರಾವ್ ಪೇಶ್ವೆ, ವಿವಿಧ ನೀರಾವರಿ ನಿಗಮಗಳ ವ್ಯವಸ್ಥಾಪಕ ನಿರ್ದೇಶಕರು ಸಭೆಯಲ್ಲಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net