ಶಿವಮೊಗ್ಗದಲ್ಲಿ ವಿಷಾಹಾರ ಸೇವನೆಯಿಂದ 20ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥ

student
Published on

ಶಿವಮೊಗ್ಗ: ನಗರದ ಸಹ್ಯಾದ್ರಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಗುರುವಾರ ರಾತ್ರಿ ವಿಷಾಹಾರ ಸೇವನೆಯಿಂದ 20ಕ್ಕೂ ಅಧಿಕ ವಿದ್ಯಾರ್ಥಿನಿಯರು ಅಸ್ವಸ್ಥಗೊಂಡಿದ್ದು, ಈ ಪೈಕಿ 11 ವಿದ್ಯಾರ್ಥಿನಿಯರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬಾಲಕಿಯರ ಹಾಸ್ಟೆಲ್‌ನಲ್ಲಿ ರಾತ್ರಿ ಊಟ ಸೇವಿಸಿದ ಬಳಿಕ ಕೆಲವರ ಆರೋಗ್ಯದಲ್ಲಿ ಏರುಪೇರಾಗಿದೆ. ತಲೆ ಸುತ್ತು, ಉಸಿರಾಟದ ತೊಂದರೆ, ವಾಂತಿ, ಬೇಧಿ ಕಾಣಿಸಿಕೊಂಡಿದ್ದು ಅಸ್ವಸ್ಥಗೊಂಡವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

10 ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಿ ರಾತ್ರಿಯೇ ಹಾಸ್ಟೆಲ್‌ಗೆ ಕಳುಹಿಸಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಉಳಿದ 11 ವಿದ್ಯಾರ್ಥಿನಿಯರನ್ನು ಒಳರೋಗಿಗಳನ್ನಾಗಿ ದಾಖಲು ಮಾಡಿಕೊಳ್ಳಲಾಗಿತ್ತು. ಶುಕ್ರವಾರ ಬೆಳಗ್ಗೆ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದರಿಂದ ಅವರನ್ನೂ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದರು. ಜಿಪಂ ಮಾಜಿ ಸದಸ್ಯ ಕೆ.ಇ.ಕಾಂತೇಶ್, ಕುವೆಂಪು ವಿವಿ ಸಿಂಡಿಕೇಟ್ ಸದಸ್ಯ ಸಂತೋಷ್ ಬಳ್ಳೆಕೆರೆ ಇತರರು ಆಸ್ಪತ್ರೆಗೆ ಭೇಟಿ ನೀಡಿ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net