ನಗರದಲ್ಲಿ ಅಕ್ರಮವಾಗಿ ವಾಸವಿದ್ದ ವಿದೇಶಿ ಪ್ರಜೆ ಸೆರೆ

crime
Published on

ಬೆಂಗಳೂರು: ವೀಸಾ ಅವಧಿ ಮುಗಿದರೂ ನಗರದಲ್ಲಿ ಅಕ್ರಮವಾಗಿ ವಾಸವಿದ್ದ ಆರೋಪದಡಿ ವಿದೇಶಿ ಪ್ರಜೆ ಇಮ್ಯೂನಿಯಲ್ ಜಿಡೊಜಿನ್ (೨೮) ಎಂಬುವನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಡ್ರಗ್ಸ್ ವಿರುದ್ಧ ಕಾರ್ಯಾಚರಣೆ ನಡೆಸಲಾಗಿತ್ತು. ಇದೇ ಸಂದರ್ಭದಲ್ಲಿ ಹಲವರ ಮನೆಗಳಲ್ಲಿ ಪರಿಶೀಲಿಸಲಾಯಿತು. ನೈಜೀರಿಯಾದ ಜಿಡೊಜಿನ್ ಎಂಬಾತ ನಗರದಲ್ಲಿ ಅಕ್ರಮವಾಗಿ ವಾಸವಿದ್ದುದ್ದು ತಿಳಿಯಿತು. ಈತನನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಲಾಗಿದೆ.

೨೦೧೫ರಲ್ಲಿ ಪ್ರವಾಸಿ ವೀಸಾದಡಿ ನಗರಕ್ಕೆ ಬಂದಿದ್ದ ಆರೋಪಿ, ಬಾಣಸವಾಡಿಯ ಮನೆಯೊಂದರಲ್ಲಿ ನೆಲೆಸಿದ್ದ. ೨೦೧೯ರಲ್ಲಿ ಈತನ ವೀಸಾ ಅವಧಿ ಮುಗಿದಿತ್ತು. ಅಷ್ಟಾದರೂ ಈತ ತಮ್ಮ ದೇಶಕ್ಕೆ ವಾಪಸು ಹೋಗಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net