ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಸ್​ನಲ್ಲಿ ಉಚಿತ ​ಪ್ರಯಾಣ

sslc exam photo
Published on

ಬೆಂಗಳೂರು: ಜುಲೈ 19 ಮತ್ತು 22ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾರ್ಥಿಗಳಿಗೆ ಉಚಿತ ಬಸ್​ ಪ್ರಯಾಣ ಸೌಲಭ್ಯ ಮಾಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಆದೇಶ ಹೊರಡಿಸಿದೆ.

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಯುವ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಕೇಂದ್ರಗಳವರೆಗೆ ನಿಗಮದ ಬಸ್‌ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ ನೀಡಲಾಗಿದ್ದು, ಪರೀಕ್ಷಾ ಕೇಂದ್ರಗಳ ಬಳಿ ಕೋರಿಕೆಯ ನಿಲುಗಡೆಗೂ ಅವಕಾಶ ನೀಡಲಾಗಿದೆ. ವಿದ್ಯಾರ್ಥಿಗಳು ಬಸ್‌ನಲ್ಲಿ ಪ್ರಯಾಣಿಸುವಾಗ ಕಡ್ಡಾಯವಾಗಿ ಪರೀಕ್ಷಾ ಪ್ರವೇಶ ಪತ್ರ ಹೊಂದಿರಬೇಕು ಎಂದು ಕೆಎಸ್ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ತಿಳಿಸಿದ್ದಾರೆ.

ಜು.19ರಂದು ಕೋರ್ ಸಬ್ಜೆಕ್ಟ್ (ಗಣಿತ, ವಿಜ್ಞಾನ, ಸಮಾಜ ವಿಜ್ಞಾನ) ಹಾಗೂ ಜು.22ರಂದು ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net