

ತೆಲಂಗಾಣ: ಕಳೆದ ಒಂದು ತಿಂಗಳಿನಿಂದ ಟಾಲಿವುಡ್ ಅಂಗಳದಲ್ಲಿ ಸಿನಿಮಾ ಸುದ್ದಿಗಿಂತಲೂ ಹೆಚ್ಚು ಸದ್ದು ಮಾಡುತ್ತಿರುವುದು ಯುವ ನಟ ರಾಜ್ ತರುಣ್ ಮತ್ತು ಲಾವಣ್ಯ ಪ್ರೇಮ ವಿವಾದ. 11 ವರ್ಷಗಳ ಲಿವ್ಇನ್ ರಿಲೇಷನ್ಶಿಪ್ನಲ್ಲಿದ್ದು, ಪ್ರೀತಿಸಿ, ಗುಟ್ಟಾಗಿ ಮದುವೆಯಾಗಿ ಇದೀಗ ತನಗೆ ಮೋಸ ಮಾಡಿದ್ದಾನೆ ಎಂದು ತೆಲುಗು ನಟ ರಾಜ್ ತರುಣ್ ವಿರುದ್ಧ ಗಂಭೀರ ಆರೋಪ ಹೊರಿಸಿರುವ ಪ್ರೇಯಸಿ ಲಾವಣ್ಯ, ರಾಜ್ನಿಂದ ನನಗೆ ಅನ್ಯಾಯವಾಗಿದೆ. ಆತ ತನ್ನ ಸಹ ನಟಿಯಾದ ಮಾಳ್ವಿ ಮಲ್ಹೋತ್ರಾ ಜತೆ ಅನೈತಿಕ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಿ, ನರಸಿಂಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ವಿಷಯ ದಿನದಿಂದ ದಿನಕ್ಕೆ ತೀವ್ರವಾಗುತ್ತಿದ್ದು, ದಿನಕ್ಕೊಂದು ಟ್ವಿಸ್ಟ್ ಅನ್ನೋದಕ್ಕಿಂತ ಕ್ಷಣಕ್ಕೊಂದು ಟ್ವಿಸ್ಟ್ ಎನ್ನುವಂತಾಗಿದೆ.
ಇದನ್ನೂ ಓದಿ: 11ರಂದು ಸಿಂಹಾಸನಪುರಿ ವೈಭವ ನೃತ್ಯ ರೂಪಕ
ನನಗೆ ನ್ಯಾಯ ಸಿಗುವವರೆಗೂ ಹೋರಾಡುತ್ತೇನೆ ಎಂದು ಪಣತೊಟ್ಟಿರುವ ಲಾವಣ್ಯ ಒಂದೆಡೆಯಾದರೆ, ಪೊಲೀಸರು ಕಳಿಸಿರುವ ವಿಚಾರಣಾ ನೋಟಿಸ್ಗೆ ಲಾಯರ್ ಮೂಲಕ ಪ್ರತಿಕ್ರಿಯಿಸಿರುವ ರಾಜ್ ತರುಣ್ ಮತ್ತೊಂದೆಡೆ. ಲಾವಣ್ಯ ಹೂಡಿರುವ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ ಇದೀಗ ನೇರವಾಗಿ ಹೈಕೋರ್ಟ್ ಮೊರೆ ಹೋಗಿದ್ದು, ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ ಎನ್ನಲಾಗಿದೆ. ಭಾರೀ ವಿವಾದದ ನಡುವೆಯೇ ನಟನ ಎರಡು ಬಹುನಿರೀಕ್ಷಿತ ಚಿತ್ರಗಳನ್ನು ಚಿತ್ರಮಂದಿರಗಳಲ್ಲಿ ಬಿಡುಗಡೆಗೊಳಿಸಿದ ನಿರ್ಮಾಪಕರಿಗೆ, ಇದೀಗ ನಿರೀಕ್ಷಿಸದ ಸೋಲನ್ನು ಅನುಭವಿಸುವಂತಾಗಿದೆ.
ಇಷ್ಟು ದಿನ ನಟಿ ಮಾಳ್ವಿ ಮಲ್ಹೋತ್ರಾ, ರಾಜ್ ತರುಣ್ ಮತ್ತು ಲಾವಣ್ಯ ನಡುವೆ ಮಾತ್ರ ನಡೆಯುತ್ತಿದ್ದ ಲವ್ ತ್ರಿಕೋನಕ್ಕೆ ಇದೀಗ ರಾಜ್ ಪೋಷಕರು ನೀಡಿದ ಹೇಳಿಕೆ ಮತ್ತೊಂದು ಶಾಕಿಂಗ್ ಟ್ವಿಸ್ಟ್ ಕೊಟ್ಟಿದೆ. ಲಾವಣ್ಯ ನಮಗೆ ಕಿರುಕುಳ ನೀಡುತ್ತಿದ್ದಾಳೆ ಎಂದು ನಟನ ಪೋಷಕರು ದೂರಿದ್ದಾರೆ. ಸದ್ಯ ಈ ಬೆಳವಣಿಗೆ ಕುಟುಂಬಸ್ಥರಲ್ಲಿ ಆತಂಕ ಸೃಷ್ಟಿಸಿದ್ದು, ಇದು ಯಾವ ಹಂತಕ್ಕೆ ಹೋಗಿ ನಿಲ್ಲಲಿದೆ ಎಂದು ಚಿಂತಿಸುವಂತೆ ಮಾಡಿದೆ,(ಏಜೆನ್ಸೀಸ್).