ಸಾರಿಗೆ ಬಸ್​ಗಳ ಮುಖಾಮುಖಿ ಡಿಕ್ಕಿ: 20ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ

New Project(6)
Published on

ಹಾವೇರಿ: ಹಾನಗಲ್ ತಾಲೂಕು ಬೈಚುವಳ್ಳಿ ಗ್ರಾಮದ ಬಳಿ ಶನಿವಾರ ಬೆಳಗ್ಗೆ ಎರಡು ಸಾರಿಗೆ ಬಸ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು, 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಎರಡೂ ಬಸ್​ನ ಚಾಲಕರಿಬ್ಬರಿಗೂ ಗಂಭೀರ ಗಾಯವಾಗಿದೆ.

ಬಸ್​ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲೆಯ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿದ್ದರು. ಬಸ್​ನಲ್ಲಿ ಶಾಲೆಗೆ ತೆರಳುತ್ತಿದ್ದರು. ಮಾರ್ಗಮಧ್ಯೆ ಬಸ್​ಗಳು ಅಪಘಾತಕ್ಕೀಡಾಗಿದ್ದು. ಕೆಲಕಾಲ ಆತಂಕ ಸೃಷ್ಟಿಸಿತ್ತು. ಗಾಯಗೊಂಡ ಮಕ್ಕಳನ್ನು ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ಕೊಡಲಾಗುತ್ತಿದೆ. ಹಾನಗಲ್ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.(ದಿಗ್ವಿಜಯ ನ್ಯೂಸ್​, ಹಾವೇರಿ)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net