ಪ್ರತಿ ತಿಂಗಳ ಮೂರನೇ ಶನಿವಾರ ಕುಂದುಕೊರತೆ ಸಭೆ ನಿಗದಿ

Panchayat raj commissionerate
Published on

ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಅಧಿಕಾರಿಗಳು ಮತ್ತು ಸಿಬ್ಬಂದಿ ಕುಂದು-ಕೊರತೆಗಳ ಬಗ್ಗೆ ಚರ್ಚಿಸಲು ಬೆಂಗಳೂರಿನ ಪಂಚಾಯತ್‌ರಾಜ್ ಆಯುಕ್ತಾಲಯದಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಸಭೆ ನಿಗದಿಯಾಗಿದೆ.

ಗ್ರಾಮ ಪಂಚಾಯತಿ ನೌಕರರ ವಿವಿಧ ಸಂಘಟನೆಗಳ ಜಂಟಿ ಸಭೆಯಲ್ಲಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ ನೀಡಿದ್ದರು. ಅದರಂತೆಯೇ ಕುಂದು-ಕೊರತೆ ಸಭೆಗೆ ಪ್ರತಿ ಮಾಸಿಕದ ಮೂರನೇ ಶನಿವಾರ ಗೊತ್ತುಪಡಿಸಿದ್ದಾರೆ.

ಪಂಚಾಯತ್‌ರಾಜ್ ಆಯುಕ್ತಾಲಯದ ಆಯುಕ್ತರ ಅಧ್ಯಕ್ಷತೆಯಲ್ಲಿ ಪ್ರತಿ ತಿಂಗಳು ಮೂರನೇ ಶನಿವಾರ ಮಧ್ಯಾಹ್ನ 3ಕ್ಕೆ ಈ ಸಭೆ ನಡೆಯಲಿದೆ. ನೌಕರರು ಹಾಜರಾಗಿ ತಮ್ಮ ಆಹವಾಲುಗಳ ಕುರಿತು ಚರ್ಚಿಸಬಹುದು ಎಂದು ಪಂಚಾಯತ್‌ರಾಜ್ ಇಲಾಖೆ ಆಯುಕ್ತರಾದ ಡಾ.ಅರುಂಧತಿ ಚಂದ್ರಶೇಖರ್ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net