ಗುಜರಾತ್ ಸಿಎಂ ವಿಜಯ್ ರೂಪಾನಿ ದಿಢೀರ್​ ರಾಜೀನಾಮೆ! ಅವಧಿಗೂ ಮೊದಲೇ ರಾಜೀನಾಮೆ ಕೊಟ್ಟಿದ್ದೇಕೆ?

vijay ropani
Published on

ಗಾಂಧಿನಗರ: ಗುಜರಾತ್ ಸಿಎಂ ವಿಜಯ್ ರೂಪಾನಿ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಪಾಲ ಆಚಾರ್ಯ ದೇವವ್ರತ್ ಅವರನ್ನು ಶನಿವಾರ ಭೇಟಿ ಮಾಡಿದ ವಿಜಯ್ ರೂಪಾನಿ, ರಾಜೀನಾಮೆ ಸಲ್ಲಿಸಿದರು. ನರೇಂದ್ರ ಮೋದಿ ತವರಲ್ಲಿ ಇಂದು ಸಂಭವಿಸಿದ ದಿಢೀರ್​ ಬೆಳವಣಿಗೆ ಅಚ್ಚರಿ ಮೂಡಿಸಿದೆ.

ರಾಜೀನಾಮೆಯ ಹಿಂದಿನ ನಿಜವಾದ ಕಾರಣ ಸ್ಪಷ್ಟವಾಗಿಲ್ಲವಾದರೂ, ಆಡಳಿತಾರೂಢ ಬಿಜೆಪಿಯ ರಾಜ್ಯ ಘಟಕದ ಅಧ್ಯಕ್ಷ ಸಿ.ಆರ್. ಪಾಟೀಲ್ ಅವರೊಂದಿಗಿನ ಭಿನ್ನಾಭಿಪ್ರಾಯಗಳು ವಿಜಯ್​ರನ್ನು ಕೆಳಗಿಳಿಯುವಂತೆ ಮಾಡಿರಬಹುದು ಎಂಬ ಮಾತುಗಳೂ ಕೇಳಿ ಬಂದಿದೆ. ಮುಂದಿನ ವರ್ಷ ತನ್ನ ಅಧಿಕಾರಾವಧಿಯನ್ನು ಮುಗಿಸಬೇಕಿದ್ದ ರೂಪಾನಿ, 2017ರ ಡಿಸೆಂಬರ್‌ನಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದ್ದರು.

ರಾಜೀನಾಮೆ ಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ವಿಜಯ್​ ರೂಪಾನಿ, ನನಗೆ ಇಷ್ಟು ದಿನ ಸಿಎಂ ಆಗಿ ಕೆಲಸ ಮಾಡಲು ಸಹಕರಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರಿಗೆ ಧನ್ಯವಾದ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net