

ಗುಜರಾತ್: ಚುನಾವಣೆ ಸಮೀಪಿಸುತ್ತಿದ್ದಂತೆ ಇಲ್ಲಿನ ರಾಜ್ಯ ರಾಜಕೀಯದಲ್ಲಿ ಬುಧವಾರ ಮಹತ್ತರ ಬೆಳವಣಿಗೆಯಾಗಿದೆ. ಗುಜರಾತ್ನ ಪ್ರಭಾವಿ ಸಮುದಾಯದ ಯುವ ನಾಯಕ ಹಾರ್ದಿಕ್ ಪಟೇಲ್ ಕಾಂಗ್ರೆಸ್ನಿಂದ ಹೊರಬಂದಿದ್ದಾರೆ.
ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಹಾರ್ದಿಕ್ ಪಟೇಲ್, ನನ್ನ ನಿರ್ಧಾರವನ್ನು ನನ್ನ ಅಭಿಮಾನಿಗಳು, ಮಿತ್ರರು, ರಾಜ್ಯದ ಜನತೆ ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ ನನಗಿದೆ. ಗುಜರಾತ್ಗಾಗಿ ನನ್ನ ಮುಂದಿನ ನಡೆ ಇರಲಿದೆ ಎಂದು ಟ್ವೀಟ್ ಮಾಡಿದ್ದಾರೆ.
28 ವರ್ಷದ ಹಾರ್ದಿಕ್ ಪಟೇಲ್, 2015ರಲ್ಲಿ ಗುಜರಾತ್ನಲ್ಲಿ ಪಟೇಲ್ ಸಮುದಾಯದ ಮೀಸಲಾತಿ ಚಳವಳಿ ಮುನ್ನಡೆಸುವ ಮೂಲಕ ಮುನ್ನೆಲೆಗೆ ಬಂದಿದ್ದರು. 2019ರಲ್ಲಿ ಕಾಂಗ್ರೆಸ್ನ ರಾಷ್ಟ್ರನಾಯಕ ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಪ್ರಭಾವಿ ಯುವ ನಾಯಕ ಎಂದೇ ಗುರುತಿಸಿಕೊಂಡಿದ್ದ ಹಾರ್ದಿಕ್, ಕಾಂಗ್ರೆಸ್ ತೊರೆದಿದ್ದು, ಪಕ್ಷಕ್ಕೆ ಪೆಟ್ಟು ಆಗಿದ್ದಂತೂ ನಿಜ. ಹಾರ್ದಿಕ್ ಯಾವ ಪಕ್ಷಕ್ಕೆ ಸೇರ್ತಾರೆ ಎಂಬುದು ಇನ್ನೂ ಗೊತ್ತಾಗಿಲ್ಲ.