

ಪೋರ್ಟ್ ಔ ಫ್ರಿನ್ಸ್(ಹೈಟಿ): ಗ್ಯಾಸೋಲಿನ್ ಟ್ಯಾಂಕ್ ಸ್ಫೋಟಗೊಂಡು 70ಕ್ಕೂ ಹೆಚ್ಚು ಮಂದಿ ಮೃತಪಟ್ಟ ಘಟನೆ ಮಂಗಳವಾರ ರಾತ್ರಿ ರೆಬಿಯನ್ ರಾಷ್ಟ್ರಗಳಲ್ಲಿ ಒಂದಾದ ಹೈಟಿಯಲ್ಲಿ ಸಂಭವಿಸಿದೆ.
ಗ್ಯಾಸೋಲಿನ್ ಸಾಗಿಸುತ್ತಿದ್ದ ಟ್ರಕ್ ನಿಯಂತ್ರಣ ತಪ್ಪಿ ರಸ್ತೆಯಲ್ಲೇ ಉರುಳಿಬಿದ್ದಿದ್ದು, ಕ್ಷಣಾರ್ಧದಲ್ಲೇ ಗ್ಯಾಸೋಲಿನ್ ಟ್ಯಾಂಕ್ ಸ್ಫೋಟಗೊಂಡು ಇಡೀ ಪ್ರದೇಶಕ್ಕೆ ಬೆಂಕಿಯ ಕೆನ್ನಾಲಗೆ ವ್ಯಾಪಿಸಿತ್ತು. ರಸ್ತೆ ಅಕ್ಕಪಕ್ಕದ ಮನೆಗಳು ಮತ್ತು ಕಾರುಗಳು ಬೆಂಕಿಯಲ್ಲಿ ಹೊತ್ತಿ ಉರಿದ್ದು, ಅಪಾರ ಪ್ರಮಾಣದಲ್ಲಿ ಸಾವು-ನೋವು ಸಂಭವಿಸಿದೆ.
ಈ ದುರಂತದಲ್ಲಿ 70ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಸಾಕಷ್ಟು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸುಟ್ಟ ಗಾಯಗಳಿಂದ ನರಳಾಡುತ್ತಿದ್ದಾರೆ. 50ಕ್ಕೂ ಮನೆಗಳು ಹಾನಿಯಾಗಿವೆ ಎಂದು ತಿಳಿದು ಬಂದಿದೆ. (ಏಜೆನ್ಸೀಸ್)