ಹಸು ಸಾಕಲು ಆರಂಭಿಸಿದ ಎಚ್​.ಡಿ. ಕುಮಾರಸ್ವಾಮಿ!

hdk
Published on

ಬೆಂಗಳೂರು: ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ರಾಮನಗರ ತಾಲೂಕಿನ ಕೇತಗಾನಹಳ್ಳಿಯ ತಮ್ಮ ತೋಟದ ಮನೆಯಲ್ಲಿ ಹಸುಗಳನ್ನು ಸಾಕಲು ಆರಂಭಿಸಿದ್ದಾರೆ.

ಬಸವ ಜಯಂತಿಯ ದಿನವಾದ ಶುಕ್ರವಾರ ನಾಲ್ಕು ಗೋವುಗಳನ್ನು ತೋಟದ ಮನೆಗೆ ತಂದು ಕುಟುಂಬದ ಸದಸ್ಯರೊಂದಿಗೆ ಪೂಜೆ ಸಲ್ಲಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಎಚ್​ಡಿಕೆ, ರಾಜಕೀಯ ಮತ್ತು ಕೃಷಿ ದೃಷ್ಟಿಯಿಂದ ರಾಮನಗರ ನನ್ನ ಕರ್ಮಭೂಮಿ. ಕೇತಗಾನಹಳ್ಳಿಯ ನನ್ನ ಕೃಷಿ ಭೂಮಿಗೆ ಬಸವ ಜಯಂತಿಯ ಶುಭ ದಿನದಂದು ಕಪಿಲ, ಸ್ವರ್ಣಕಪಿಲ, ಗಿರ್ ತಳಿಯ ನಾಲ್ಕು ಗೋವುಗಳನ್ನು ಪ್ರೀತಿಪೂರ್ವಕವಾಗಿ ಬರಮಾಡಿಕೊಂಡಿದ್ದೇವೆ ಎಂದು ಹೇಳಿದ್ದಾರೆ.

ಹಸುಗಳಿಗೆ ತನ್ನ ಕುಟುಂಬ ಭಕ್ತಿಪೂರ್ವಕವಾಗಿ ಪೂಜಿಸಿದ ಸಂಭ್ರಮದ ಕ್ಷಣಗಳ ಫೋಟೋವನ್ನು ಕುಮಾರಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net