ಆರೋಗ್ಯವಂತ ಮಗು ದೇಶದ ಸಂಪತ್ತು

01SPT4
ಸೋಮವಾರಪೇಟೆ ಇನ್ನರ್‌ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ಹಾನಗಲ್ಲು ಅಂಗನವಾಡಿ ಕೇಂದ್ರದಲ್ಲಿ ನಡೆದ ಸೀಮಂತ ಕಾರ್ಯಕ್ರಮದಲ್ಲಿ ಪೌಷ್ಟಿಕಾಂಶಯುಕ್ತ ಆಹಾರಗಳನ್ನು ತಯಾರಿಸುವ ಬಗ್ಗೆ ತನ್ಮಯಿ ಪ್ರವೀಣ್ ತಿಳಿಸಿಕೊಟ್ಟರು. ಸುವಿನಾ, ಸಂಗೀತಾ, ನಂದಿನಿ, ಶಾರದ ಇದ್ದರು.
Published on

ಸೋಮವಾರಪೇಟೆ: ಇನ್ನರ್‌ವೀಲ್ ಕ್ಲಬ್ ಆಫ್ ಸೋಮವಾರಪೇಟೆ ಗೋಲ್ಡ್ ವತಿಯಿಂದ ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಅಂಗವಾಗಿ ಹಾನಗಲ್ಲು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿಯರಿಗೆ ಸೀಮಂತ ಹಾಗು ಬಾಣಂತಿಯರಿಗೆ ಪೌಷ್ಟಿಕ ಆಹಾರದ ಮಹತ್ವದ ಬಗ್ಗೆ ಮಾಹಿತಿ ಕಾರ್ಯಕ್ರಮ ಸೋಮವಾರ ನಡೆಯಿತು.

ಇನ್ನರ್‌ವೀಲ್ ಅಧ್ಯಕ್ಷೆ ತನ್ಮಯಿ ಪ್ರವೀಣ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಆರೋಗ್ಯವಂತ ಮಗು ದೇಶದ ಸಂಪತ್ತು. ಗರ್ಭಿಣಿಯರು ಪೌಷ್ಟಿಕಾಂಶಯುಕ್ತ ಆಹಾರ ಸೇವಿಸಬೇಕು. ಒತ್ತಡ ಮುಕ್ತವಾಗಿ ಜೀವನ ಶೈಲಿ ಬೆಳೆಸಿಕೊಳ್ಳುವ ಮೂಲಕ ಆರೋಗ್ಯವಂತ ಮಗು ಜನನಕ್ಕೆ ತಮ್ಮ ಕೊಡುಗೆ ನೀಡಬೇಕು ಎಂದರು.

ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಲಡ್ಡು ಮತ್ತು ರೊಟ್ಟಿಯಂತಹ ಕಡಿಮೆ ವೆಚ್ಚದ ಪಾಕ ವಿಧಾನಗಳನ್ನು ತಯಾರಿಸುವ ಬಗ್ಗೆ ಮಾಹಿತಿ ನೀಡಲಾಯಿತು. ಅಂಗನವಾಡಿ ಮಕ್ಕಳು, ಪಾಲಕರು, ಗರ್ಭಿಣಿಯರು ಮತ್ತು ತಾಯಂದಿರು ಭಾಗವಹಿಸಿದ್ದರು. ಮಕ್ಕಳಿಗೆ ಬೆಚ್ಚನೆಯ ಉಡುಪು, ಅಗತ್ಯ ಪರಿಕರಗಳನ್ನು ವಿತರಿಸಲಾಯಿತು.

ಇನ್ನರ್‌ವೀಲ್ ಕ್ಲಬ್ ಪ್ರಧಾನ ಕಾರ್ಯದರ್ಶಿ ಸುವಿನಾ ಕೃಪಾಲ್, ಮಾಜಿ ಅಧ್ಯಕ್ಷೆ ಸಂಗೀತಾ ದಿನೇಶ್, ಪದಾಧಿಕಾರಿ ನಂದಿನಿ ಗೋಪಾಲ್ ಹಾಗೂ ಅಂಗನವಾಡಿ ಶಿಕ್ಷಕಿ ಶಾರದ ಪುರುಷೋತ್ತಮ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net