

ಚಿಕ್ಕಮಗಳೂರು: ಕರ್ತವ್ಯದಲ್ಲಿದ್ದಾಗಲೇ ಬಸ್ನಲ್ಲಿ ಹೃದಯಾಘಾತವಾಗಿ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಮೃತಪಟ್ಟ ಘಟನೆ ಮೂಡಿಗೆರೆಯಲ್ಲಿ ಸಂಭವಿಸಿದೆ.
ವಿಜಯ್(43) ಮೃತರು. ಶನಿವಾರ ಬೆಳಗ್ಗೆ 6ಕ್ಕೆ ಚಿಕ್ಕಮಗಳೂರಿನಿಂದ ಉಡುಪಿಗೆ ಹೊರಟಿದ್ದ ಕೆಎಸ್ಆರ್ಟಿಸಿ ಬಸ್ನಲ್ಲಿ ವಿಜಯ್ ಕೆಲಸ ನಿರ್ವಹಿಸುತ್ತಿದ್ದರು. ಮಾರ್ಗಮಧ್ಯೆ ಚಾರ್ಮಾಡಿ ಘಾಟ್ನ ಮಲಯ ಮಾರುತ ಬಳಿ ವಿಜಯ್ಗೆ ಎದೆನೋವು ಕಾಣಿಸಿಕೊಂಡಿದೆ. ತಕ್ಷಣ ಮೂಡಿಗೆರೆ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಬದುಕಲಿಲ್ಲ.