

ಸೋಮವಾರಪೇಟೆ : ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿತು.
ಬುಧವಾರ ಸಾಹಿತ್ಯ ಭವನದಲ್ಲಿ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ತಾಲೂಕು ಅಧ್ಯಕ್ಷ ಎಸ್.ಡಿ.ವಿಜೇತ ಮತ್ತು ಆಡಳಿತ ಮಂಡಳಿ ಸದಸ್ಯರು ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಒಂದು ನಿಮಿಷ ಮೌನಾಚರಣೆಯ ಮೂಲಕ ಆತ್ಮಕ್ಕೆ ಶಾಂತಿ ಕೋರಿದರು.
ಅಧ್ಯಕ್ಷ ಎಸ್.ಡಿ.ವಿಜೇತ್ ಮಾತನಾಡಿ, ಎಸ್.ಎಂ.ಕೃಷ್ಣ ಅವರು ರಾಜ್ಯ ಕಂಡ ಅತ್ಯುತ್ತಮ ರಾಜಕಾರಣಿಗಳಲ್ಲಿ ಒಬ್ಬರು. ಅವರು ಮುಖ್ಯಮಂತ್ರಿ ಅವಧಿಯಲ್ಲಿ ತಲಾಕಾವೇರಿ, ಭಾಗಮಂಡಲ ಕ್ಷೇತ್ರದ ಅಭಿವೃದ್ಧಿಗೆ ದೊಡ್ಡಮಟ್ಟದ ಅನುದಾನ ಕಲ್ಪಿಸಿದ್ದಾರೆ. ಬೆಂಗಳೂರು ಐಟಿ, ಬಿಟಿಯಲ್ಲಿ ಪ್ರಗತಿ ಸಾಧಿಸಬೇಕಾದರೆ ಅವರ ಕೊಡಗೆ ಅಪಾರ ಎಂದು ಹೇಳಿದರು.
ಸಭೆಯಲ್ಲಿ ಗೌರವ ಕಾಯದರ್ಶಿಗಳಾದ ಜ್ಯೋತಿ ಅರುಣ್, ಎ.ಪಿ.ವೀರರಾಜು, ಪರಿಷತ್‌ನ ಪದಾಧಿಕಾರಿಗಳಾದ ಬಿ.ಟಿ.ತಿಮ್ಮಶೆಟ್ಟಿ, ಎಚ್.ಎ.ನಾಗರಾಜ್, ಜಮೀರ್, ಪ್ರಮುಖರಾದ ದಿನೇಶ್ ಹಾಲೇರಿ, ಸತೀಶ್ ಕುಮಾರ್, ಎ.ವಿ.ದರ್ಶನ್ ಇದ್ದರು.