ರಾಜ್ಯದಲ್ಲಿ ಮುಂದಿನ 5 ದಿನ ವ್ಯಾಪಕ ಮಳೆ

rain
Published on

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ನಾಳೆಯಿಂದ 5 ದಿನ ವ್ಯಾಪಕ ಮಳೆಯಾಗಲಿದೆ. ಉತ್ತರ ಒಳನಾಡು, ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಜು.7ರಿಂದ 11ರ ವರೆಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ.

ಬೀದರ್​, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಧಾರವಾಡ, ಚಿತ್ರದುರ್ಗ, ತುಮಕೂರು ಜಿಲ್ಲೆಯ ಹಲವೆಡೆ ಮಳೆಯಾಗಲಿದೆ. ಬೆಂಗಳೂರಿನಲ್ಲೂ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸದ್ಯ ಹಲವೆಡೆ ಮೋಡಮುಸುಕಿದ ವಾತಾವರಣವಿದ್ದು, ಕೆಲವೆಡೆ ಮಳೆಯಾಗುತ್ತಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net