ಇನ್ನೆರಡು ದಿನದ ಬಳಿಕ ರಾಜ್ಯದಲ್ಲಿ ಭಾರಿ ಮಳೆ

rain
Published on

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಜೂ.28ರಿಂದ ರಾಜ್ಯದಲ್ಲಿ ಮತ್ತೆ ಮುಂಗಾರು ಮಳೆ ಚುರುಕುಗೊಳ್ಳಲಿದೆ.

ಈಗಾಗಲೇ ವಿವಿಧಡೆ ಮಳೆಯಾಗುತ್ತಿದ್ದು, ಎರಡು ದಿನಗಳ ಬಳಿಕ ಬಿರುಸುಗೊಳ್ಳಲಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂ.28ರಿಂದ 30ರವರೆಗೆ ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಉತ್ತರ ಒಳನಾಡಿನಲ್ಲಿ ಮುಂದಿನ ಐದು ದಿನ ಸಾಧಾರಣ ಮಳೆಯಾದರೆ, ದಕ್ಷಿಣ ಒಳನಾಡಿನ ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೋಲಾರ ಸೇರಿ ಇನ್ನಿತರ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net