ರಾಜ್ಯದ ಹಲವೆಡೆ ನಾಳೆಯಿಂದ 3 ದಿನ ಭಾರಿ ಮಳೆ

Lead Rain
Published on

ಬೆಂಗಳೂರು: ರಾಜ್ಯದಲ್ಲಿ ಅ.1ರಿಂದ ಮುಂದಿನ ಮೂರು ದಿನ ಭಾರಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ಗುಲಾಬ್​ ಚಂಡ ಮಾರುತ ಹಾಗೂ ಅದರಿಂದ ಮರುಹುಟ್ಟು ಪಡೆದ ಶಾಹಿನ್​ ಚಂಡ ಮಾರುತದ ಪ್ರಭಾವ ಅರಬ್ಬಿ ಸಮುದ್ರದ ಮೇಲೂ ಆಗುತ್ತಿದೆ. ಪರಿಣಾಮ ಕರ್ನಾಟಕದ ಹಲವೆಡೆ ಮೂರು ದಿನ ಮಳೆಯಾಗಲಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಅ.1ರಿಂದ ಅ.3ರ ವರೆಗೆ ಮಳೆಯಾಗಲಿದೆ.

ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಅ.1 ಮತ್ತು 2ರಂದು ಭಾರಿ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅರ್ಲಟ್​ ಘೋಷಿಸಿದೆ.

ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ ಮತ್ತು ಚಿಕ್ಕಬಳ್ಳಾಪುರದಲ್ಲಿ ಅ.1ರಂದು ಯೆಲ್ಲೋ ಅರ್ಲಟ್​ ಇರಲಿದೆ. ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆ ಇರಲಿದೆ. ಬೆಂಗಳೂರಿನಲ್ಲಿ ಮುಂದಿನ 2 ದಿನ ಮೋಡ ಕವಿದ ವಾತಾವರಣ ಇರಲಿದ್ದು, ಆಗಾಗ್ಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net